ಬೆಂಗಳೂರು: ಕೇಂದ್ರ ಸರಕಾರ ರೂಪಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಲ್ಲಿ ರಾಜ್ಯವೇ ಮೊದಲು ಎಂಬ ಪ್ರಶಂಸೆಗೆ ಪಾತ್ರವಾಗಲು ರಾಜ್ಯ ಸರ್ಕಾರ ಕಸರತ್ತು ನಡೆಸುತ್ತಿದೆ. ಈ ಸಂಬಂಧ ಕಸರತ್ತಿನಲ್ಲಿ ತೊಡಗಿದ್ದು ಕೇಂದ್ರದ ಮಾರ್ಗಸೂಚಿ ಜಾರಿಗೊಳಿಸಲು ಅಧಿಕಾರಿಗಳನ್ನು ಸಜ್ಜುಗೊಳಿಸಲಾಗುತ್ತಿದೆ.
ಈ ಕುರಿತಂತೆ ರಾಮನಗರದಲ್ಲಿ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ್ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕವೇ ಮೊತ್ತ ಮೊದಲಿಗೆ ಜಾರಿ ಮಾಡುವ ರಾಜ್ಯವಾಗಲಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರಕಾರ ರೂಪಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.
ಹೊಸ ನೀತಿಯ ಕರಡು ಪ್ರತಿ ಸಿಕ್ಕಿದ ಕೂಡಲೇ ಸರಕಾರ ಇದಕ್ಕೆ ಸಂಬಂಧಿಸಿ ಕಾರ್ಯಪಡೆಯನ್ನು ರಚನೆ ಮಾಡಿತ್ತು. ನೀತಿಯ ಜಾರಿ ಸಂಬಂಧ ಈ ಕಾರ್ಯಪಡೆ ಆದಷ್ಟು ಬೇಗ ವರದಿ ನೀಡಲಿದೆ ಎಂದು ಅಶ್ವತ್ಥ ನಾರಾಯಣ್ ಹೇಳಿದರು.