ಬೆಂಗಳೂರು,: ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಕುರಿತು ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್. ವಿ. ರಂಗನಾಥ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಟಾಸ್ಕ್ ಪೋರ್ಸ್ ಸಮಿತಿಯು ಇಂದು ತನ್ನ ವರದಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಲ್ಲಿಸಿತು.
ಈ ಸಮಿತಿಯ ಶಿಫಾರಸುಗಳನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವಂತೆ ಮುಖ್ಯಮಂತ್ರಿಗಳು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಸೂಚಿಸಿದರು..
ಸಭೆಯಲ್ಲಿ ಮಾತನಾಡಿದ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯರು ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ ರಚಚನಾ ಸಮಿತಿಯ ಸದಸ್ಯರು ಆದ ಪ್ರೊ. ಎಂ.ಕೆ. ಶ್ರೀಧರ್ ಅವರು ಮಾತನಾಡಿ, 175 ವರ್ಷಗಳ ನಂತರ ಭಾರತ ಸರ್ಕಾರವು ತನ್ನದೇ ಆದ ಶಿಕ್ಷಣ ನೀತಿಯನ್ನು ರೂಪಿಸಿದೆ.
ಈ ನೀತಿ ನಿರೂಪಣೆಯಲ್ಲಿ ಕರ್ನಾಟಕ ರಾಜ್ಯ ಮಹತ್ವದ ಪಾತ್ರ ವಹಿಸಿದೆ. ಶಿಕ್ಷಣ ವ್ಯವಸ್ಥೆಗೆ ಸರ್ಕಾರ ಹಾಗೂ ಸಮಾಜ ಹೆಚ್ಚಿನ ಒತ್ತು ನೀಡಬೇಕೆನ್ನುವುದು ಶಿಕ್ಷಣ ನೀತಿಯ ಆಶಯ ಎಂದು ವಿವರಿಸಿದರು.