ನವದೆಹಲಿ: ತೀವ್ರ ವಿವಾದ ಮುಸ್ಲಿಂ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಬಿಜೆಪಿ ಕರ್ನಾಟಕ ಘಟಕ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಪೋಸ್ಟನ್ನು ತೆಗೆದುಹಾಕುವಂತೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ ಗೆ ನಿರ್ದೇಶನ ನೀಡಿದೆ.
ಬಿಜೆಪಿ ಪಕ್ಷವು ರಾಹುಲ್ ಗಾಂಧೀ ಬಗ್ಗೆ ಟೀಕಿಸಿರುವ ಹಾಗೂ ಜಾತಿ-ಜಾತಿ ನಡುವೆ ವೈಷಮ್ಯ ಹುಟ್ಟುಹಾಕುವ ಪೋಸ್ಟ್ ಹಾಕಿರುವ ಬಗ್ಗೆ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಸಾಮಾಜಿಕ ಮಾಧ್ಯಮ ‘ಎಕ್ಸ್’ ಗೆ ಪತ್ರ ಬರೆದು ಅನಿಮೇಟೆಡ್ ಕಾರ್ಟೂನ್ ವಿಡಿಯೋವನ್ನು ‘ತಕ್ಷಣ’ ತೆಗೆದುಹಾಕುವಂತೆ ಸೂಚಿಸಿದೆ.