ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಪ್ರಕಟವಾಗಿದೆ.
ಪರಿಷತ್ ಶಾಸಕರಾದ ಅರವಿಂದ್ ಕುಮಾರ್ ಅರಳಿ, ಎನ್ಎಸ್ ಬೋಸರಾಜು, ಕೆ, ಗೋವಿಂದರಾಜ್, ತೇಜಸ್ವಿನಿ ಗೌಡ, ಮುನಿರಾಜು ಗೌಡ, ಕೆ.ಪಿ.ನಂಜುಂಡಿ, ಬಿ.ಎಂ. ಫಾರುಖ್, ರಘುನಾಥ್ ರಾವ್ ಮಲ್ಕಾಪೂರೆ, ಎನ್.ರವಿ ಕುಮಾರ್, ಎಸ್.ರುದ್ರೇಗೌಡ, ಕೆ.ಹರೀಶ್ ಕುಮಾರ್.
11 ಸದಸ್ಯರ ಅಧಿಕಾರವಾಧಿ ಜೂನ್ 17ಕ್ಕೆ ಮುಕ್ತಾಯವಾಗಲಿದ್ದು, ತೆರವಾಗಲಿರುವ ಸ್ಥಾನಗಳಿಗೆ ಜೂನ್ 13ರಂದು ಮತದಾನ ನಡೆಯಲಿದೆ. ಈ ಸಂಬಂಧ ಕೇಂದ್ರ ಚುನಾವಣಾ ಆಯೋಗವು ಸೋಮವಾರ ದಿನಾಂಕ ಘೋಷಣೆ ಮಾಡಿದೆ.
2024 ಮೇ 27ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು, ಜೂನ್ 3ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿರುತ್ತದೆ. ಜೂನ್ 4ರಂದು ನಾಮಪತ್ರ ಪರಿಶೀಲನೆ ನಡೆಉಲಿದ್ದು, ಜೂನ್ 6ರಂದು ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದೆ. ಜೂನ್ 13ರಂದು ಮತದಾನ ನಡೆಯಲಿದ್ದು, ಅಂದೇ ಸಂಜೆ 5ಗಂಟೆಗೆ ಮತಗಳ ಎಣಿಕೆ ನಡೆಯಲಿದೆ.























































