ಬೆಂಗಳೂರು: ಜನಪ್ರಿಯ ವಂದೇ ಭಾರತ್ ರೈಲು ದರ ಬಲು ದುವಾರಿ ಎಂಬ ಸಾರ್ವಜನಿಕರ ಅಭಿಪ್ರಾಯ ಹಿನ್ನೆಲೆಯಲ್ಲಿ ಪ್ರಯಾಣ ದರ ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ರೈಲ್ವೇ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ, ವಂದೇ ಭಾರತ್ ರೈಲು ಸಹಿತ ಎಲ್ಲ ರೈಲುಗಳ ದರ ಪಟ್ಟಿ ಪರಿಷ್ಕರಣೆ ಮಾಡುವ ಚಿಂತನೆ ಇದೆ ಎಂದು ತಿಳಿಸಿದ್ದಾರೆ.
ದರ ಇಳಿಕೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಜತೆ ಚರ್ಚಿಸಲಾಗಿದೆ ಎಂದು ಅವರು ತಿಳಿಸಿದರು.
ಇದೇ ವೇಳೆ, ಕರ್ನಾಟಕದಲ್ಲಿ ನ ರೈಲ್ವೇ ವಲಯಗಳಲ್ಲಿ ಕನ್ನಡದವರಿಗೆ ಆದ್ಯತೆ ನೀಡಲಾಗುತ್ತದೆ ಎಂದ ಅವರು, ಕರ್ನಾಟಕದವರೇ ಹೆಚ್ಚು ಮಂದಿ ನೌಕರರನ್ನು ನಿಯುಕ್ತಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಸಿದರು.