ಕಾಂಕೇರಿ: ಲೋಕಸಭಾ ಚುನಾವಣಾ ಅಖಾಡದಲ್ಲಿ ರಾಜಕೀಯ ಪಕ್ಷಗಳ ಸೆಣಸಾಟ ನಡೆಯುತ್ತಿದ್ದರೆ ಇನ್ನೊಂದೆಡೆ ಛತ್ತೀಸ್‌ಗಡದಲ್ಲಿ ನಕ್ಸಲರು ಸಂಘರ್ಷಕ್ಕಿಳಿದಿದ್ದಾರೆ. ಮತದಾನಕ್ಕೆ ಕೇವಲ ಇನ್ನೂ ಮೂರು ದಿನ ಬಾಕಿಯಿರುವಂತೆಯೇ ಛತ್ತೀಸ್ ಗಢದ ಕಾಂಕೇರಿ ಜಿಲ್ಲೆಯಲ್ಲಿ ಮಂಗಳವಾರ ಗುಂಡಿನ ಕಾಳಗ ನಡೆದಿದೆ. ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಕನಿಷ್ಠ 18 ಮಂದಿ ಮಾವೋವಾದಿಗಳು ಸಾವನ್ನಪ್ಪಿದ್ದಾರೆ.
ನಕ್ಸಲರ ಗುಂಪು ಶಸ್ತ್ರಸ್ತ್ರ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಭದ್ರತಾ ಪಡೆ ಕ್ಷಿಪ್ರ ಕಾರ್ಯಾಚರಣೆಗಿಳಿಯಿತು. ಈ ವೇಳೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಡಿ ಭದ್ರತಾ ಪಡೆ ಮತ್ತು ರಾಜ್ಯ ಮೀಸಲು ಪಡೆ ಜಂಟಿಯಾಗಿ ಹಪಟೋಲಾ ಅರಣ್ಯ ಪ್ರದೇಶದಲ್ಲಿ ಮಾವೋವಾದಿಗಳ ವಿರುದ್ದ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.