ಬೆಂಗಳೂರು: ನಾನೇ ಹೋಗಿ ಗುಂಡಿಗೆ ಬಿದ್ದೆ. ನನಗಾಗಿರುವ ಅನ್ಯಾಯ ಯಾರಿಗೂ ಆಗಬಾರದು. ಜನವರಿ 9ಕ್ಕೆ ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಆಗುತ್ತೇನೆ. ಜನವರಿ 10ರ ಒಳಗೆ ಎಲ್ಲವೂ ಬಗೆಹರಿಯಲಿದೆ ಎಂಬ ವಿಶ್ವಾಸ ಇದೆ. ಇದು ಮಾಜಿ ಸಚಿವ ವಿ.ಸೊಮ್ಮಣ್ಣ ಅವರ ಮಾತುಗಳು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಮ್ಮ ರಾಜಕೀಯ ನಡೆ ಬಗ್ಗೆ ಮಾಹಿತಿಕೊಂಡ ಬಿಜೆಪಿ ನಾಯಕ ವಿ.ಸೋಮಣ್ಣ, ಯಾರೋ ನನಗೆ ಮಾಟ ಮಾಡಿಸಿದ್ರೇನೋ, ನಾನೇ ಹೋಗಿ ನಾಲ್ಕೂವರೆ ಅಡಿ ಗುಂಡಿಗೆ ಬಿದ್ದೆ. ನನಗೆ ಆದ ಅನ್ಯಾಯ ಯಾರಿಗೂ ಆಗಬಾರದು ಎಂದು ಬೇಸರ ಹೊರಹಾಕಿದ್ದಾರೆ.
ಸ್ವಕ್ಷೇತ್ರ ಗೋವಿಂದರಾಜನಗರ ಕ್ಷೇತ್ರ ಬಿಡಬಾರದಿತ್ತು. ನನಗೆ ಆದ ಅನ್ಯಾಯ ಯಾರಿಗೂ ಆಗಬಾರದು ಎಂದ ಅವರು, ಜನವರಿ 9ಕ್ಕೆ ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಯಾಗಿ ನನಗಾಗಿರುವ ಅನ್ಯಾಯದ ಬಗ್ಗೆ ಹೇಳಿಕೊಳ್ಳುತ್ತೇನೆ, ಬಹುಶಃ ಜನವರಿ 10ರ ಒಳಗೆ ಎಲ್ಲವೂ ಬಗೆಹರಿಯಲಿದೆ ಎಂಬ ವಿಶ್ವಾಸ ಇದೆ ಎಂದರು. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ಅಭಿಪ್ರಾಯ ಹಂಚಿಕೊಂಡ ಸೋಮಣ್ಣ, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ವಿಚಾರದಲ್ಲಿ ರಾಷ್ಟ್ರೀಯ ವರಿಷ್ಠರ ಮಾತಿಗೆ ಬದ್ಧನಿದ್ದೇನೆ ಎಂದರು.






















































