ನವದೆಹಲಿ: ವಿದ್ಯುನ್ಮಾನ ಮತಯಂತ್ರ (EVM) ಬಗ್ಗೆ ಇದೀಗ ಮತ್ತೆ ಅಪಸ್ವರ ಎದ್ದಿದೆ. ಇವಿಎಂ ಅನ್ನು ಹ್ಯಾಕ್ ಮಾಡಬಹುದೆಂಬ ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಹೇಳಿಕೆ ಭಾರತದಲ್ಲಿ ಸಂಚಲನ ಸೃಷ್ಟಿಸಿದೆ.
ಈ ಬೆಳವಣಿಗೆಯನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಭಾರತದಲ್ಲಿನ ಇವಿಎಂಗಳನ್ನು ‘ಕಪ್ಪು ಪೆಟ್ಟಿಗೆ’ ಎಂದು ಬಣ್ಣಿಸಿದ್ದಾರೆ. ಭಾರತದಲ್ಲಿನ ಇವಿಎಂಗಳನ್ನು ಪರಿಶೀಲಿಸಲು ಯಾರಿಗೂ ಅನುಮತಿಯಿಲ್ಲ ಎಂದು ಕುಟುಕಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ರಾಹುಲ್ ಗಾಂಧಿ, ‘ನಮ್ಮ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯ ಬಗ್ಗೆ ಗಂಭೀರ ಕಳವಳಗಳನ್ನು ವ್ಯಕ್ತಪಡಿಸಲಾಗುತ್ತಿದೆ ಎಂದಿದ್ದಾರೆ.
ಸಂಸ್ಥೆಗಳ ಹೊಣೆಗಾರಿಕೆಯಲ್ಲಿ ಕೊರತೆಯಿರುವಾಗ ಪ್ರಜಾಪ್ರಭುತ್ವವು ನೆಪವಾಗಿ ಪರಿಣಮಿಸುತ್ತದೆ ಮತ್ತು ವಂಚನೆಗೆ ಗುರಿಯಾಗುತ್ತದೆ ಎಂದವರು ಪ್ರತಿಪಾದಿಸಿದ್ದು, ಎಲೆನ್ ಮಸ್ಕ್ ಅವರ EVM ವಿರೋಧಿ ಅಭಿಯಾನಕ್ಕೆ ಧ್ವನಿಗೂಡಿಸಿದ್ದಾರೆ.
EVMs in India are a “black box,” and nobody is allowed to scrutinize them.
Serious concerns are being raised about transparency in our electoral process.
Democracy ends up becoming a sham and prone to fraud when institutions lack accountability. https://t.co/nysn5S8DCF pic.twitter.com/7sdTWJXOAb
— Rahul Gandhi (@RahulGandhi) June 16, 2024