ಬೆಂಗಳೂರು: ವಿಧಾನಪರಿಷತ್ ನ ಮಾಜಿ ಸದಸ್ಯ ಕಾಂಗ್ರೆಸ್ ಪಕ್ಷದ ವಕ್ತಾರ ರಮೇಶ್ ಬಾಬು ಅವರು ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿದ ಅದ್ವೀತಿಯ ಸಾಧನೆಯನ್ನು ಪರಿಗಣಿಸಿದ ರಾಜ್ಯ ಸರ್ಕಾರ ಇವರಿಗೆ ಪ್ರಸಕ್ತ ಸಾಲಿನ ಸಹಕಾರ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ರಾಜ್ಯ ವಕೀಲರ ಸಹಕಾರ ಬ್ಯಾಂಕ್ ನಿರ್ದೇಶಕರಾಗಿ ರಾಷ್ಟ್ರೀಯ ಸಹಕಾರ ಮಹಾಮಂಡಲದ ಸದಸ್ಯರಾಗಿ ಸೌಹಾರ್ದ ಸಹಕಾರ ತಿದ್ದುಪಡಿ ಕಾಯಿದೆ ಸೇರಿ ಸಹಕಾರ ಕ್ಷೇತ್ರದ ಹಲವಾರ ಸಮಸ್ಯೆಗಳಿಗೆ ಸ್ಪಂದಿಸಿ ಸಹಕಾರ ಕ್ಷೇತ್ರದ ಬೆಳವಣಿಗೆಗೆ ನೀಡಿದ ಕೊಡುಗೆಗೆ ಈ ಗೌರವ ನೀಡಲಾಗಿದೆ.
ಸಹಕಾರ ದಿನಾಚರಣೆ ಅಂಗವಾಗಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು.