ಬೆಂಗಳೂರು: ವಿಧಾನಪರಿಷತ್ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿರುವ ಬಿಜೆಪಿ ತನ್ನ ಬಂಡಾಯ ಅಭ್ಯರ್ಥಿಗಳ ವಿರುದ್ದ ಉಚ್ಚಾಟನೆಯ ಅಸ್ತ್ರ ಪ್ರಯೋಗಿಸಿದೆ. ನೈರುತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಪಾಟೀಲ್ ಆದೇಶಿಸಿದ್ದಾರೆ.