ಬೆಂಗಳೂರು: ಕೇಂದ್ರ ಸರ್ಕಾರದ ಮೂರೂ ಕೃಷಿ ಕಾಯ್ದೆಗಳು ರದ್ದಾಗುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಕಿಸಾನ್ ಕಾಂಗ್ರೆಸ್ ಹೇಳಿದೆ.
ಕೇಂದ್ರ ಸರ್ಕಾರ ರೂಪಿಸಿರುವ ಕಾಯ್ದೆಗಳನ್ನು ಸರ್ವೋಚ್ಚ ನ್ಯಾಯಾಲಯ ತಡೆಹಿಡಿದ ನಂತರದ ಬೆಳವಣಿಗೆ ಕುರಿತಂತೆ ಪ್ರತಿಕ್ರಿಯಿಸಿರುವ ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ, ಇಷ್ಟಕ್ಕೇ ನಾವು ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದರು. ಸರ್ವೋಚ್ಚ ನ್ಯಾಯಾಲಯವು ಈ ಮೂರು ರೈತ ವಿರೋಧಿ ಕಾಯ್ದೆಗಳನ್ನು ರದ್ದು ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರೈತ ವಿರೋಧಿ ಕಾಯ್ದೆಗಳು ರದ್ದಾಗುವವರೆಗೂ ಕರ್ನಾಟಕ ಕಿಸಾನ್ ಕಾಂಗ್ರೆಸ್ ಹೋರಾಟ ನೆಡೆಸುತ್ತದೆ ಎಂದವರು ಹೇಳಿದ್ದಾರೆ.
ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿನ್ ಮಿಗಾ, ಜನವರಿ 26ರ ಗಣರಾಜ್ಯೋತ್ಸವ ಕಾರ್ಯಕ್ರಮ ನೆಡೆಸುವ ಉದ್ದೇಶದಿಂದ ಬಿಜೆಪಿಯು ಕಸರತ್ತಿನಲ್ಲಿ ತೊಡಗಿದೆ ಎಂದು ದೂರಿದ್ದಾರೆ.
ನ್ಯಾಯಾಲಯದಲ್ಲಿನ ತಡೆಯಾಜ್ಞೆ ತೆರವುಗೊಳಿಸಲು ಸರ್ಕಾರ ಪ್ರಯತ್ನಿಸಲಿದೆ. ಹಾಗಾಗಿ ನಾವು ಕೇಂದ್ರ ಸರ್ಕಾರದ ವಿರುದ್ಧದ ಹೋರಾಟವನ್ನು ಮುಂದುವರೆಸುತ್ತೇವೆ. ಕಾಯ್ದೆ ರದ್ದು ಆಗುವವರೆಗೂ ಚಳುವಳಿ ನೆಡೆಸುತ್ತೇವೆ ಎಂದು ಸಚಿನ್ ಮೀಗಾ ಹೇಳಿದ್ದಾರೆ.