ಬೆಂಗಳೂರು: ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಬೆಂಬಲಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್’ನಲ್ಲಿ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತರಿಂದ ಉಪವಾಸ ಸತ್ಯಾಗ್ರಹನಡೆಯಿತು.
ದೆಹಲಿ ಹೋರಾಟದ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲ ಉಪವಾಸ ಸತ್ಯಾಗ್ರಹ ಬೆಂಬಲಿಸಿ. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ರೈತನಾಯಕರ ಉಪವಾಸ ಸತ್ಯಾಗ್ರಹ ಆರಂಭವಾಗಿದೆ. ರೈತರ ಕಷ್ಟ ನೀಗಿಸಿ ಅನ್ನದ ಋಣ ತೀರಿಸಿ ಎಂದು ಘೋಷಣೆ ಹಾಕುತ್ತ ಹೋರಾಟಗಾರರು ಉಪವಾಸ ಆರಂಭಿಸಿದರು. ಒಂದೊಂದು ಜಿಲ್ಲೆಯ ರೈತರು ಪ್ರತಿನಿತ್ಯ ಸರದಿ ಉಪವಾಸ ನಡೆಸುತ್ತಾರೆ. ಶನಿವಾರ ಗುಲ್ಬರ್ಗ 8ರಂದು ಮೈಸೂರು ಜಿಲ್ಲೆ, 9ರಂದು ಧಾರವಾಡ 10ರಂದು ಹಾಸನ ಜಿಲ್ಲೆ 11ರಂದು ಗದಗ್ ಜಿಲ್ಲೆ 12ರಂದು ಚಾಮರಾಜನಗರ ಜಿಲ್ಲೆ, 13ರಂದು ಉತ್ತರ ಕನ್ನಡ ಜಿಲ್ಲೆ ಹಳಿಯಾಳ, 14ರಂದು ಬೆಳಗಾವಿ, 15ರಂದು ದಾವಣಗೆರೆ ಜಿಲ್ಲೆಗಳ ರೈತರಿಂದ ಬೆಳಿಗ್ಗೆಯಿಂದ ಸಂಜೆ 5:00 ತನಕ ಸರದಿ ಉಪವಾಸ ನಡೆಯಲಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೆತರ) ಸಂಘಟನೆಯ ದಕ್ಷಿಣ ಭಾರತ ಸಂಚಾಲಕ.ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ನವೆಂಬರ್ 26ರಿಂದ ದೇಶದ ರೈತರ ಹಿತಕ್ಕಾಗಿ ಉಪವಾಸ ನಡೆಸುತ್ತಿರುವುದು 11 ದಿನಕ್ಕೆ ಕಾಲಿಟ್ಟಿದೆ. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ತರಬೇಕು , ಡಾ ಸ್ವಾಮಿನಾಥನ್ ವರದಿಯಂತೆ ಬೆಂಬಲ ಬೆಲೆ ನಿಗದಿಯಾಗಬೇಕು, ರೈತರ ಸಾಲ ಸಂಪೂರ್ಣ ಮನ್ನಾ ಆಗಬೇಕು, 60 ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿಗೆ ತರಬೇಕು, ಫಸಲ್ ಭೀಮಾ ಬೆಳೆ ವಿಮೆ ಯೋಜನೆ ತಿದ್ದುಪಡಿಯಾಗಬೇಕು ಎಂದು ಒತ್ತಾಯಿಸಿ ದೆಹಲಿ ಗಡಿಯಲ್ಲಿ ರೈತರು ಹೋರಾಟ ನಡೆಸುತ್ತಿದ್ದಾರೆ.
ದೆಹಲಿ ಹೋರಾಟ ಬೆಂಬಲಿಸಿ ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಉಪವಾಸ ಸತ್ಯಾಗ್ರಹದಲ್ಲಿ ಬಸವರಾಜ್ ಪಾಟೀಲ್ ತುಮಕೂರು ಶಿವಕುಮಾರ್ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, , ರಮೇಶ್ ಹೂಗಾರ್, ರಾಜುಗುಂದಗಿ. ರೇವಣ್ಣ, ಮಾರ್ಬಳ್ಳಿ ನೀಲಕಂಠಪ್ಪ, ವರಕೊಡು ನಾಗೇಶ್, ಸೂರಿ, ಹೆಗ್ಗೂರು ರಂಗರಾಜು, ಶೇಖರಪ್ಪ, ಗಿರೀಶ, ಕಮಲಮ್ಮ, ಅಂಬಳೆ ಮಂಜುನಾಥ್, ಸತೀಶ್, ಪ್ರಕಾಶ್,
ವಕೀಲ ಅಮರೇಶ್ ಮೊದಲಾದ ರೈತ ನಾಯಕರು ಭಾಗವಹಿಸಿದ್ದರು.