ಬೆಂಗಳೂರು: KSRTC ಬಸ್ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿರುವ ಘಟನೆಗೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಹಲ್ಲೆ ನಡೆಸಿದ ಆರೋಪ ಕುರಿತಂತೆ ಪೊಲೀಸ್ ಸಿಬ್ಬಂದಿ ವಿರುದ್ಧ ವಿಜಯಪುರ ಜಿಲ್ಲಾ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ.
ದಾವಣಗೆರೆ – ಬಳ್ಳಾರಿ ಮಾರ್ಗದಲ್ಲಿ ಕಾರ್ಯಚಾರಣೆಯಲ್ಲಿದ್ದ ಕೆಎಸ್ಸಾರ್ಟಿಸಿ ಬಸ್ ಗಜಾಪುರದ ಬಳಿ (ಕೂಡ್ಲಿಗಿ ಹತ್ತಿರ) ಎದುರಗಡೆಯಿಂದ ಬಂದ ಕಾರಿಗೆ ತಗುಲಿದೆ ಎನ್ನಲಾಗಿದೆ. ಆದರೆ ಬಾಸ್ ಚಾಲಕ ತನಗೆ ಅರಿವಿಲ್ಲದಂತೆ ಮುಂದೆ ಸಾಗಿದ್ದರು. ಆ ದ್ವಿ ಚಕ್ರ ವಾಹನ ಸವಾರರು ಪೊಲೀಸ್ ಸಿಬ್ಬಂದಿಯಾಗಿದ್ದು, ಘಟನೆಯಿಂದ ಸಿಟ್ಟಾದ ದ್ವಿಚಕ್ರ ಸವಾರರು ಸ್ವಲ್ಪ ದೂರದಲ್ಲಿ, ಬಸ್ಸನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ಮಾಡಿ ಸೇಡು ತೀರಿಸಿಕೊಂಡಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಸಾರಿಗೆ ನಿಗಮದ ಸಿಬ್ಬಂದಿ ತಪ್ಪಿಸಿದ್ದಾರೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಿಗಮದ ನಿರ್ದೇಶಕರಿಗೆ ಸೂಚಿಸಿದ್ದಾರೆ.
ಇದೇ ವೇಳೆ, ಕರ್ತವ್ಯದಲ್ಲಿದ್ದ ಬಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಪರಿಶೀಲನೆ ನಡೆಸಿರುವ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಕ್ರಮಕ್ಕೆ ನಿರ್ದೇಶಿಸಿದ್ದು, ಹಲ್ಲೆ ಮಾಡಿದವರ ಮೇಲೆ FIR ದಾಖಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.