ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಆರ್ಆರ್ ನಗರದಲ್ಲಿರುವ ಅಪಾರ್ಟ್ಮೆಂಟ್ ನಿವಾಸಿಗಳ ಬಳಿ ಮತ ಯಾಚಿಸಿದ ಸಂದರ್ಭದಲ್ಲಿ ಡಿಕೆಶಿಯವರು ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ ಕುರಿತ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಬಿಜೆಪಿ ನಾಯಕ ಅಮಿತ್ ಮಾಳವೀಯ ಅವರು, ಡಿಸಿಎಂ ಅಧಿಕಾರ ದುರುಪಯೋಗ ಮಾಡಿಕೊಂಡು, ಮತದಾರರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದರು. ಅಷ್ಟೇ ಅಲ್ಲ ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ ಮಾಡಿತ್ತು.
ಈ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿದೆ.
An FIR is lodged by the FST of Bengaluru against Dy. Chief Minister DK Shivakumar for violation of MCC while addressing apartment owners in RR Nagara. The FIR No.78/2024 at RMC Yard PS is lodged u/s 171(B)(C)(E)(F) of IPC for bribery and undue influence at elections.
— Chief Electoral Officer, Karnataka (@ceo_karnataka) April 20, 2024