ಸೋಲನ್: ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಆಕಸ್ಮಿಕ ಸಂಭವಿಸಿ ಕಾರ್ಮಿಕ ಸಾವನ್ನಪ್ಪಿದ್ದಾನೆ. ಸೌಂದರ್ಯವರ್ಧಕ ತಯಾರಿಕಾ ಘಟಕದಲ್ಲಿ ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 31 ಮಂದಿಗೆ ಗಾಯಗೊಂಡಿದ್ದಾರೆ.
ಶುಕ್ರವಾರ ರಾತ್ರಿ ಘಟನೆ ನಡೆದಿದ್ದು ಸುದ್ದಿ ತಿಳಿದ ಕೂಡಲೇ ಧಾವಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯಾಚಾರಣೆ ನಡೆಸಿ ಹಲವರನ್ನು ಪಾರು ಮಾಡಿದೆ. 2೦ಕ್ಕೂ ಹೆಚ್ಚು ವಾಹನಗಳು ಅಗ್ನಿಶಮನ ಕಾರ್ಯಾಚರಣೆ ನಡೆಸಿವೆ. ಈ ಘಟನೆಯಲ್ಲಿ ಮಹಿಳೆ ಸಾವನ್ನಪ್ಪಿರುವುದನ್ನು ಅಧಿಕಾರಿಗಳು ದೃಢಪಡಿಸಿದ್ದಾರೆ.
#WATCH | 41 people including 19 injured people were rescued after a fire broke out in a perfume factory in the Baddi area of Solan district today; Teams of NDRF and Fire Department engaged in the operation to rescue affected persons and douse fire#HimachalPradesh pic.twitter.com/A1l6ypP5HI
— ANI (@ANI) February 2, 2024