ನವದೆಹಲಿ: ಬಿಜೆಪಿಯ ಫೈರ್ ಬ್ರಾಂಡ್ ನಾಯಕ ಎಂದೇ ಗುರುತಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಹೈಕಮಾಂಡ್ ಉಚ್ಛಾಟನೆ ಮಾಡಿದೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಕಮಾಂಡ್ ಕೈಗೊಂಡಿರುವ ಈ ಕ್ರಮ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.
ಬಸನಗೌಡ ಪಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟಿಸಲಾಗಿದೆ ಎಂದು ಪಕ್ಷದ ಶಿಸ್ತು ಸಮಿತಿ ಹೇಳಿದೆ.