ವಿಜಯಪುರ: ವಿಜಯಪುರ ಜಿಲ್ಲೆಯ ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು ಮಾರ್ಧನಿಸಿದೆ. ದುಷ್ಕರ್ಮಿಗಳ ಗುಂಪು ಗುಂಡಿನ ದಾಳಿ ನಡೆಸಿ ರೌಡಿಶೀಟರ್ ಅಶೋಕ ಮಲ್ಲಪ್ಪ ಗಂಟಗಲ್ಲಿ ಎಂಬಾತನನ್ನು ಕೊಲೆ ಮಾಡಿದೆ.
ಚಡಚಣ ಪಟ್ಟಣದ ನೀವರಗಿ ರಸ್ತೆಯಲ್ಲಿ ಈ ದಾಳಿ ನಡೆದಿದ್ದು, ಅಶೋಕ ಮಲ್ಲಪ್ಪ ಗಂಟಗಲ್ಲಿಯನ್ನು ಆತನ ಮನೆ ಬಳಿಯೇ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಅಶೋಕ ಮಲ್ಲಪ್ಪ ಗಂಟಗಲ್ಲಿ ಕೊಲೆ ಹಾಗೂ ಹಲವು ಅಪರಾಧ ಭಾಗಿಯಾದ ಆರೋಪ ಇದೆ. ಇತ್ತೀಚೆಗೆ ಜೈಲಿನಿಂದ ಪೆರೋಲ್ ಮೇಲೆ ಹೊರಬಂದಿದ್ದ ಈತನ ಹಂತಕರ ಗುಂಡಿಗೆ ಬಲಿಯಾಗಿದ್ದಾನೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.