ಸೂರತ್: ಲೋಕಸಭಾ ಚುನಾವಣೆಯ ಮೊದಲ ಫಲಿತಾಂಶ ಘೋಷಣೆಯಾಗಿದೆ. ಸೂರತ್ನಲ್ಲಿ ಚುನಾವಣೆಗೂ ಮುನ್ನವೇ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಅದಾಗಿಯೂ ಬಿಜೆಪಿ ಅಭ್ಯರ್ಥಿಗೆ ಏಳು ಸ್ವತಂತ್ರ ಹುರಿಯಾಳುಗಳು ಸವಾಲಾಗಿದ್ದರು. ಈ ಸ್ವತಂತ್ರ ಅಭ್ಯರ್ಥಿಗಳ ನಾಮಪತ್ರ ಹಿಂಪಡೆಯುವಂತೆ ಮನವೊಲಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಅಂತಿಮವಾಗಿ ಬಿಜೆಪಿಯ ಮುಖೇಶ್ ದಲಾಲ್ ಒಬ್ಬರೇ ಕಣದಲ್ಲಿ ಇದ್ದು, ಅವರು ಅವಿರೋಧವಾಗಿ ಆಯ್ಕೆಯಾಗುವಂತಾಗಿದೆ.







































































