ಅಮರಾವತಿ: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಬುಧವಾರ ಐದು ಯುವಕರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೂವರು ಯುವಕರ ಶವಗಳು ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ.
ಶಿವರಾತ್ರಿಯ ರಾಜಾ ದಿನದ ಹಿನ್ನೆಲೆಯಲ್ಲಿ 20 ವರ್ಷದೊಳಗಿನ 11 ವಿದ್ಯಾರ್ಥಿಗಳ ಗುಂಪು ಮುಂಜಾನೆ ನದಿಗೆ ಸ್ನಾನಕ್ಕೆ ಹೋಗಿದ್ದಾಗ ಜಿಲ್ಲೆಯ ತಲ್ಲಪುಡಿ ಮಂಡಲದ ತಡಿಪುಡಿಯಲ್ಲಿ ಈ ಘಟನೆ ಸಂಭವಿಸಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಅವರು ಪರಸ್ಪರ ಉಳಿಸಲು ಪ್ರಯತ್ನಿಸಿದರು ಮತ್ತು ಈ ಪ್ರಕ್ರಿಯೆಯಲ್ಲಿ ಐದು ಮಂದಿ ಮುಳುಗಿ ಸಾವನ್ನಪ್ಪಿದರು. ಆರು ಮಂದಿ ಈಜಿ ದಡಸೇರಿದ್ದಾರೆ.
ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿರುವ ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯ ಕೈಗೊಂಡರು.