ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ ವಿಧಿವಶರಾಗಿದ್ದಾರೆ. 92 ವರ್ಷ ಹರೆಯದ ಅವರು ಅನಾರೋಗ್ಯದಿಂದ ಮಂಗಳವಾರ ನಸುಕಿನ ವೇಳೆ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಧ್ಯರಾತ್ರಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. 2 ಗಂಟೆ ಸುಮಾರಿಗೆ ಉಸಿರಾಟದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ವೈದ್ಯರಿಗೆ ಮಾಹಿತಿ ನೀಡಲಾಯಿತು. ಕೂಡಲೇ ಮನೆಗೆ ಧಾವಿಸಿದ ವೈದ್ಯರು ಚಿಕಿತ್ಸೆ ನೀಡಿದರಾದರೂ ನಸುಕಿನ ಜಾವ 3:30ಕ್ಕೆ ಎಸ್‌ಎಂ ಕೃಷ್ಣ ಅವರು ಕೊನೆಯುಸಿರೆಳೆದ ಬಗ್ಗೆ ವೈದ್ಯರು ಮಾಹಿತಿ ನೀಡಿದರು.
ಮಾಜಿ ಸಿಎಂ ಎಸ್ಎಂ ಕೃಷ್ಣ ನಿಧಾನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.