ಕಾರ್ಕಳ: ಮಾಜಿ ಶಾಸಕ ದಿವಂಗತ ಹೆಚ್. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ ಅವರು ಸಾವಿಗೆ ಶರಣಾಗಿದ್ದಾರೆ. ಅವರ ಮೃತದೇಹ ಬಾರ್ಕೂರು ಬಳಿ ಪತ್ತೆಯಾಗಿದೆ.
ಬ್ರಹ್ಮಾವರ ಪೊಲೀಸ್ ಠಾಣೆ ಬಳಿ ಘಟನೆ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಹೆಬ್ರಿ ತಾಲ್ಲೂಕಿನ ನಿವಾಸಿಯಾಗಿರುವ ಸುದೀಪ್ ಅವರು, ಬಾರ್ಕೂರು ರೈಲು ಮಾರ್ಗದ ಬಳಿ ಸಾವಿಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸುದೀಪ್ ಅವರ ತಂದೆ ಹೆಚ್. ಗೋಪಾಲ ಭಂಡಾರಿ ಅವರು 1999ರಲ್ಲಿ ಮತ್ತು ನಂತರ 2008ರಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಎರಡು ಅವಧಿ ಶಾಸಕರಾಗಿದ್ದರು. ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದು, ತಮ್ಮ ಪ್ರಾಮಾಣಿಕತೆ ಮತ್ತು ಸರಳ ರಾಜಕೀಯ ಜೀವನಕ್ಕಾಗಿ ಹೆಸರುವಾಸಿಯಾಗಿದ್ದರು.