ನವದೆಹಲಿ; ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
92 ವರ್ಷ ಹರೆಯದ ಮನಮೋಹನ್ ಸಿಂಗ್ ಅವರು ವಯೋಸಹಜ ಕಾಯಿಲೆಯಿಂದ ಬಳಲಿತ್ತಿದ್ದರು. ಆಸ್ಪತ್ರೆಗೆ ದಾಖಲಾಗಿದ್ದರೂ ಅವರ ಆರೋಗ್ಯ ಕ್ಷೀಣಿಸಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನರಯುಸಿರೆಳೆದರು ಎಂದು ಆಪ್ತ ಮೂಲಗಳು ತಿಳಿಸಿವೆ.
ನರೇಂದ್ರ ಮೋದಿಗೂ ಮುನ್ನ ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಮನಮೋಹನ್ ಸಿಂಗ್ ಅವರು ಆಲಂಕರಿಸಿ ಗಮನಸೆಳೆದಿದ್ದರು.
1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ಮೂಲಕ ರಾಜಕೀಯ ಪ್ರವೇಶ ಮಾಡಿದ ಆರ್ಥಿಕ ತಜ್ಞರೂ ಆಗಿದ್ದ ಮನಮೋಹನ್ ಸಿಂಗ್ ಪ್ರಧಾನಿಯಾಗಿ ದಶಧ ಅರ್ಥಿಕ ಉದಾರೀಕರಣ ಮೂಲಕ ಗಮನಸೆಳೆದವರು. 2024ರ ಏಪ್ರಿಲ್ ವರೆಗೂ ರಾಜ್ಯಸಭೆ ಸದಸ್ಯರಾಗಿದ್ದ ಅವರು ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಸದಸ್ಯರಾಗಿದ್ದ ಹಿರಿಮೆಗೆ ಪಾತ್ರರಾಗಿದ್ದಾರೆ.
ಡಾ.ಮನಮೋಹನ ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.