ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳಿಗೆ ಕಾಂಗ್ರೆಸ್ ನಾಯಕರ ಹೆಸರುಗಳನ್ನು ಹೈಕಮಾಂಡ್ ಅಂತಿಮಗೊಳಿಸಿದೆ ಎನ್ನಲಾಗಿದೆ.
ಈ ಹಿಂದೆ ಅಂತಿಮಗೊಳಿಸಲಾಗಿದ್ದ ಪಟ್ಟಿಯಿಂದ ಇಬ್ಬರನ್ನು ಕೈಬಿಟ್ಟು ಹೊಸಬರನ್ನು ಸೇರ್ಪಡೆ ಮಾಡಲಾಗಿದೆ. 2008 ರಲ್ಲಿ ಹುಬ್ಬಳ್ಳಿ ಪೂರ್ವ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲನ್ನನುಭವಿಸಿದ್ದ ಎಪ್.ಎಚ್.ಜಕ್ಕಪ್ಪನವರಿಗೆ ಈ ಬಾರಿ ಮೇಲ್ಮನವಿ ಪ್ರವೇಶಿಸುವ ಅವಕಾಶ ಸಿಕ್ಕಿದೆ. ಅವರ ಜೊತೆಗೆ ಆರತಿ ಕೃಷ್ಣ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಹಾಗೂ ಪತ್ರಕರ್ತ ಶಿವಕುಮಾರ್ ಅವರನ್ನು ನಾಮ ನಿರ್ದೇಶನ ಮಾಡಲು ಕಾಂಗ್ರೆಸ್ ಹೈಕಮ್ಯಾಂಡ್ ಒಪ್ಪಿಗೆ ನೀಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.