ಬೆಂಗಳೂರು: ಲಾಕ್ ಡೌನ್ ವೇಳೆ ಪೌರಾಡಳಿತ ಇಲಾಖೆಯಿಂದ ಮಹತ್ವದ ನಿರ್ಧಾರವೊಂದು ಪ್ರಕಟವಾಗಿದೆ. 14 ದಿನಗಳ ಕಾಲ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ವಿತರಣೆಗೆ ಸರ್ಕಾರ ಕ್ರಮ ಕೈಗೊಂಡಿದೆ.
ಕೂಲಿ ಕಾರ್ಮಿಕರಿಗೆ, ವಲಸಿಗರಿಗೆ, ದುರ್ಬಲ ವರ್ಗದವರಿಗೆ ಆಸರೆಯಾಗಿ ನಿಂತಿರುವ ಸರ್ಕಾರ ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ..ರಾತ್ರಿಯ ಊಟವನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದೆ.
ಬಿಬಿಎಂಪಿ ಹೊರತು ಪಡಿಸಿ ಸ್ಥಳೀಯ ಸಂಸ್ಥೆ ಗಳಲ್ಲಿ ಚಾಲನೆಯಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದೆ. ಸಿಎಂ ಅನುಮತಿ ಪಡೆದು ಯೋಜನೆ ಘೋಷಣೆ ಮಾಡಿರುವ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್, ಯಾರೂ ಹಸಿವಿನಿಂದ ಬಳಲ ಬಾರದೆಂದು ಈ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.