ಗದಗ್: ಕೇಂದ್ರ ಸರ್ಕಾರ ರೂಪಿಸಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ಹಾಗೂ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ಪ್ರತಿಭಟನೆ ನಡೆಸಿದರು. ಟ್ರಾಕ್ಟರ್ ಮೂಲಕ ಮೆರವಣಿಗೆ ನಡಸಿ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ, ಮಾಜಿ ಜಿ ಎಸ್ ಪಾಟೀಲ ನೇತೃತ್ವದಲ್ಲಿ ಈ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಲಾಯಿತು. 500ಕ್ಕೂ ಹೆಚ್ಚು ಟ್ರಾಕ್ಟರ್ಗಳು ಪಾಲ್ಗೊಂಡಿದ್ದ ಈ ಬೃಹತ್ ಮೆರವಣಿಗೆ ನಗರದ ಎಪಿಎಂಸಿ ಮೂಲಕ ಸಾಗಿ ಕೆ.ಕೆ .ವೃತ್ತ, ದುರ್ಗ ವೃತ್ತ, ಹಿರೆ ಬಜಾರ ಮೂಲಕ ಸಾಗಿ ನಂತರ ಕೆ ಕೆ ವೃತ್ತದಲ್ಲಿ ಸಮಾವೇಶ ನಡೆಸಲಾಯಿತು.
ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾನೂನುಗಳನ್ನು ಜಾರಿ ಮಾಡುವ ಮೂಲಕ ಈ ದೇಶವನ್ನು ಬಂಡವಾಳ ಶಾಹಿಗಳಿಗೆ ಕೇಂದ್ರ ಸರ್ಕಾರ ಮಾರಾಟ ಮಾಡಲು ಹೊರಟಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ. ಇದರಿಂದ ಸಾಮಾನ್ಯ ಜನರ ಬದುಕು ದುಸ್ತರವಾಗುತ್ತಿದೆ. ಆದರೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದ್ಯಾವುದಕ್ಕೂ ತಲೆಕೆಡಿಸಿಕೊಂಡಿಲ್ಲ ಎಂದು ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದರು.