ಗದಗ: ಭಾರೀ ಮಳೆಯಿಂದಾಗಿ ಗದಗ ಜಿಲ್ಲೆಯ 30ಕ್ಕೂ ಹೆಚ್ಚು ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ. ನರಗುಂದ ತಾಲೂಕಿನ ಲಖಮಾಪೂರು ಗ್ರಾಮಸ್ಥರನ್ನು ಬೆಳ್ಳೇರಿ ಸರ್ಕಾರಿ ಡಿಪ್ಲೋಮಾ ಕಾಲೇಜಿನಲ್ಲಿರುವ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ. ಪ್ರವಾಹ ಸಂತ್ರಸ್ಥರಿಗಾಗಿ ಕಾಳಜಿ ಕೇಂದ್ರವನ್ನು ಆರಂಭಿಸಲಾಗಿದೆ.
ಪ್ರವಾಹಕ್ಕೆ ತುತ್ತಾದ ಹತ್ತಿರದ ಲಕಮಾಪೂರ ಗ್ರಾಮದ 156 ಜನರು ಹಾಗು ಜಾನುವಾರುಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದ್ದು, ಕಾಳಜಿ ಕೇಂದ್ರದ ವ್ಯವಸ್ಥೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾಳಜಿ ಕೆಂದ್ರದಲ್ಲಿರುವ ಸಂತ್ರಸ್ಥರೊಂದಿಗೆ ಮಾತನಾಡಿ, ಪ್ರವಾಹ ಕಡಿಮೆಯಾಗುವವರೆಗೂ ಸಹ ಇಲ್ಲಿಯೇ ಇರಬೇಕು. ಇಲ್ಲಿ ಉತ್ತಮ ರೀತಿಯ ಮೂಲ ಭೂತ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಜಿಲ್ಲಾ ಪಂಚಾಯತ್ ಸಿ.ಇ.ಓ ಭರತ್ ಎಸ್, ಜಿಲ್ಲಾ ಪೋಲಿಸ್ ಅಧೀಕ್ಷಕ ಯತೀಶ್ ಎನ್, ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ ಎಂ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ನರಗುಂದ ತಹಶೀಲ್ದಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು..