ಗದಗ ತಾಲೂಕಿನ ಹುಲಕೋಟಿ ಗ್ರಾಮದ ಬಳಿ ಲಾರಿ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಅಪಘಾಯದಲ್ಲಿ ಮೂವರಿಗೆ ಗಾಯಗಳಾಗಿವೆ.
ಮೃತರನ್ನು ಪ್ರೇಮ ಈಶ್ವರಗೌಡ ಪಾಟೀಲ್ (55) ಹಾಗೂ ಕಾರ್ ಚಾಲಕ ಅನ್ವರ್ ಎಂದು ಗುರುತಿಸಲಾಗಿದೆ. ಈಶ್ವರಗೌಡ ರುದ್ರಗೌಡ ಪಾಟೀಲ್, ಶಿವಾಬಾಯಿ ಮೇಲಗಿರಿಗೌಡ ಪಾಟೀಲ್, ಮಹಾರಾಜ ಮೇಲಗಿರಿಗೌಡ ಪಾಟೀಲ್ ಎಂಬವರು ಗಾಯಗೊಂಡಿದ್ದು ಇವರನ್ನು ಗದಗ್‌ನ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿಸಿದೆ.
ರೋಣ ತಾಲೂಕಿನ ಮಾಳವಾಡ ಗ್ರಾಮದವರಾದ ಇವರು ಹಲವು ವರ್ಷಗಳಿಂದ ಧಾರವಾಡದಲ್ಲಿ ನೆಲೆಸಿದ್ದರು. ಇಂದು ಸ್ವಗ್ರಾಮ ಮಾಳವಾಡದಲ್ಲಿನ ತಮ್ಮ ಜಮೀನಿಗೆ ಭೇಟಿ ನೀಡಿ ಮರಳುತ್ತಿದ್ದಾಗ, ಹುಲಕೋಟಿ ಗ್ರಾಮದ ರೂರಲ್ ಇಂಜಿನಿಯರಿಂಗ್ ಕಾಲೇಜು ಸಮೀಪ ಈ ದುರ್ಘಟನೆ ನಡೆದಿದೆ. ಗದಗ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.