ಗದಗ್: ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವನ್ನಪ್ಪಿ, ಏಳು ಜನರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಗದಗ ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ನಡೆದಿದೆ.
ಲಕ್ಷ್ಮೇಶ್ವರ ನಿವಾಸಿಗಳಾದ ಸರೋಜವ್ವಾ ಹಿತ್ತಲಮನಿ 30 ಹಾಗೂ ಸೋಮವ್ವಾ ಅಡುಗೆಮನಿ 48 ಮೃತ ದುರ್ದೈವಿಗಳು. ಇವರು ಹೊಲದಲ್ಲಿ ಕೂಲಿ ಕೆಲಸ ಮುಗಿಸಿಕೊಂಡು ವಾಪಾಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆ ರವಾನಿಸಲಾಗಿದೆ. ಮೃತ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಸಿಪಿಐ ವಿಕಾಸ್ ಲಮಾಣಿ ಭೇಟಿ ಪರಿಶೀಲನೆ ನಡೆಸಿದರು. ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.