ಕೋರ್ಟ್‌ನಲ್ಲಿ ಗುಂಡಿನ ಕಾಳಗ.. ಗ್ಯಾಂಗ್‌ಸ್ಟರ್ ಸಹಿತ ಮೂವರ ಸಾವು.. ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ..
ದೆಹಲಿ: ದೆಹಲಿಯ ಕೋರ್ಟ್ ಆವರಣದಲ್ಲಿ ಗುಂಡಿನ ಕಾಳಗ ನಡೆದಿದ್ದು ಮೂವರು ಸಾವನ್ಬಪ್ಪಿದ್ದಾರೆ. ಹಾಡು ಹಗಲೇ ಪೊಲೀಸ್ ಎನ್‌ಕೌಂಟರ್ ನಡೆದಿದೆ. ದೆಹಲಿಯ ರೋಹಿಣಿ ಕೋರ್ಟ್‌ನಲ್ಲಿ ಈ ಘಟನೆ ನಡೆದಿದೆ.
ಕುಖ್ಯಾತ ಗ್ಯಾಂಗ್‌ಸ್ಟರ್ ಜಿತೇಂದ್ರ ಗೋಗಿ ಹಾಗೂ ಸಹಚರರನ್ನು ಪ್ರಕರಣವೊಂದರ ಆರೋಪದ ವಿಚಾರಣೆ ಸಂಬಂಧ ಹಾಜರು ಪಡಿಸಲಾಗುತ್ತಿತ್ತು. ಈ ಸಂದರ್ಭದಲ್ಲಿ ವಕೀಲರ ಸೋಗಿನಲ್ಲಿ ಕಿಡಿಗೇಡಿಗಳು ಕೃತ್ಯಕ್ಕೆ ಮುಂದಾಗಿದ್ದರು. ಈ ವೇಳೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿದ್ದಾರೆನ್ನಲಾಗಿದೆ. ಆ ಸಂದರ್ಭದಲ್ಲಿ ಪೊಲೀಸರು ಪ್ರತಿಯಾಗಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಇಬ್ಬರು ಶೂಟರ್‌ಗಳನ್ನು ಪೊಲೀಸರು ಹೊಡೆದುರುಳಿಸಿದ್ದಾರೆ ಎನ್ನಲಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಭೂಗತ ಪಾತಕಿಗಳು ಎದುರಾಳಿ ತಂಡದ ಗ್ಯಾಂಗ್‌ಸ್ಟರ್ ಜಿತೇಂದ್ರ ಗೋಗಿಯನ್ನು ಕೊಲೆ ಮಾಡಲು ಈ ಸಂಚು ರೂಪಿಸಿ, ಈ ದಾಳಿ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.