ಕೊಪ್ಪಳ; ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಕಿಡಿಗೇಡಿಗಳ ಗುಂಪು ಹಲ್ಲೆ ನಡೆಸಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯ ಶ್ರೀರಾಮನಗರದಲ್ಲಿ ನಡೆದಿದೆ. ಸುಮಾರು 20 ಮಂದಿ ಅನ್ಯ ಕೋಮಿನ ಯುವಕರ ಗುಂಪು ಈ ಹಲ್ಲೆ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.
ಶ್ರೀರಾಮನಗರದ ಸನ್ ಶೈನ್ ಬಾರ್ನಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಮದ್ಯ ಸೇವನೆಯ ವೇಳೆ ಕುಮಾರ್ ರಾಠೋಡ್ ಎಂಬಾತ ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಅದೇ ವೇಳೆ ಮುಸ್ಲಿಂ ಯವಕರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಾಯಗೊಂಡಿರುವ ಕುಮಾರ್ ರಾಠೋಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಗಂಗಾವತಿ ಗ್ರಾಮೀಣ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


























































