ದೆಹಲಿ: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಶತಾಬ್ದಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ರೈಲಿನ ಜನರೇಟರ್ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡು ಕೆಲ ಕಾಲ ಆತಂಕಕ್ಕೆ ಕಾರಣವಾಯಿತು. ಇಂದು ಬೆಳಗ್ಗೆ ಈ ಅನಾಹುತ ಸಂಭವಿಸಿದೆ.
ಜನರೇಟರ್ ಮತ್ತು ರೈಲಿನ ಲಗೇಜ್ ಇರುವ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಬೋಗಿಯನ್ನು ಪ್ರತ್ಯೇಕಿಸಿ ಬೆಂಕಿ ನಂದಿಸುವ ಪ್ರುತ್ನ ಮಾಡಲಾಯಿತು. ಅದೃಷ್ಟವಶಾತ್ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.