ಬೆಂಗಳೂರು: ಕಾಂಗ್ರೆಸ್ ಐತಿಹಾಸಿಕ ಪಕ್ಷ. ಈ ಪಕ್ಷಕ್ಕೆ ಸೇರುತ್ತಿರುವುದು ಬಹಳ ಸಂತೋಷವಾಗುತ್ತಿದೆ ಎಂದು ಗೀತಾ ಶಿವರಾಜಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಸಂದರ್ಭದಲ್ಲಿ ಮಾತನಾಡಿದ ಅವರು, ನನ್ನನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡ ಸಹೋದರ ಡಿ.ಕೆ. ಶಿವಕುಮಾರ್ ಅವರಿಗೆ ಧನ್ಯವಾದ ಹೇಳಿದರು. ನಾವು ಕನಕಪುರಕ್ಕೆ ಶಿಫ್ಟ್ ಆಗುತ್ತಿದ್ದೇವೆ ಎಂದು ಮಾಧ್ಯಮಗಳು ತಿಳಿಸುತ್ತಿದ್ದು, ಅದೂ ಕೂಡ ಸಧ್ಯದಲ್ಲೇ ಆಗಲಿದೆ ಎಂದರು.
ತಮ್ಮ ಮಧು ಕಾಂಗ್ರೆಸ್ ಸೇರಿದಾಗಲೇ ನಾನು ಕಾಂಗ್ರೆಸ್ ಜತೆಗಿದ್ದೆ. ಶಿವರಾಜಕುಮಾರ್ ಅವರು ಕೂಡ ಕಾಂಗ್ರೆಸ್ ಪಕ್ಷದ ಕೆಲವು ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಅವರು ಚಿತ್ರೀಕರಣದಲ್ಲಿರುವುದರಿಂದ ಸಮಯ ಬಿಡುವು ಮಾಡಿಕೊಂಡು ಪ್ರಚಾರ ಮಾಡುತ್ತಾರೆ. ಪಕ್ಷ ನನಗೆ ಎಲ್ಲಿ ಹೇಳುತ್ತದೆಯೋ ಅಲ್ಲಿ ಹೋಗಿ ಪ್ರಚಾರ ಮಾಡಲು ಸಿದ್ಧನಿದ್ದೇನೆ ಎಂದವರು ತಿಳಿಸಿದರು.






















































