ಬೆಂಗಳೂರು: ಗೋಹತ್ಯೆ ನಿಷೇಧ ಜಾರಿ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ, ರೈತರನ್ನು ರಕ್ಷಿಸುವ ಕಾಯಿದೆಯನ್ನೂ ಜಾರಿಗೊಳಿಸಿ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಅವರು, ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಕಾಂಗ್ರೆಸ್-ಬಿಜೆಪಿಗೆ ಮತಬ್ಯಾಂಕ್‌ನದ್ದೇ ಆದ್ಯತೆ. ಆದರೆ, ಹಾಲು ಉತ್ಪಾದನೆಯಲ್ಲಿ ತೊಡಗಿರುವ 24 ಲಕ್ಷ ರೈತ ಕುಟುಂಬಗಳಿಗೆ ಕಾಯ್ದೆ ಬಗ್ಗೆ ಇರಬಹುದಾದ ಆತಂಕಗಳನ್ನು ಜೆಡಿಎಸ್ ವಿಮರ್ಶಿಸಲು ಬಯಸುತ್ತದೆ. ಈ ಹಿಂದೆಯೇ ಹೇಳಿದಂತೆ ಜೆಡಿಎಸ್ ಒಂದು ಪಕ್ಷವಾಗಿ ಮಾತ್ರವಲ್ಲ, ರೈತ ಸಂಘವಾಗಿ ಕೆಲಸ ಮಾಡಲಿದೆ ಎಂದಿದ್ದಾರೆ.
ಸರ್ಕಾರ ಗೋಹತ್ಯೆ ನಿಷೇಧಿಸುವ ಕಾಯ್ದೆಯನ್ನು ರೂಪಿಸಿದೆ. ಆದರೆ, ಗೋಹತ್ಯೆ ನಿಷೇಧದ ಜೊತೆಗೆ ಗೋಮಾತೆಯನ್ನು ರಕ್ಷಿಸುವ, ಗೋಮಾತೆಯನ್ನೇ ನಂಬಿದ ರೈತರನ್ನು ರಕ್ಷಿಸುವ ಕಾನೂನಾಗಿಯೂ ಇವತ್ತಿನ ಈ ಕಾಯ್ದೆ ವರ್ತಿಸಬೇಕು ಎಂಬುದು ರೈತರ ಪ್ರತಿನಿಧಿಯಾದ ಜೆಡಿಎಸ್‌ನ ಒತ್ತಾಯ. ಈ ವಿಚಾರವಾಗಿ ಯಾರದ್ದೂ ತಕರಾರು ಇಲ್ಲ ಎಂದು ನಾವು ಭಾವಿಸುತ್ತೇವೆ ಎಂದವರು ಹೇಳಿದ್ದಾರೆ.
ರೈತ ತಾನು ಪೂಜಿಸುವ, ಪೋಷಿಸುವ, ಜೀವನಾಧಾರವನ್ನಾಗಿ ನಂಬಿರುವ ಗೋವು ಈ ಕಾಯ್ದೆ ಮೂಲಕ ಆತನಿಗೆ ಹೇಗೆ ಹೊರೆಯಾಗುತ್ತದೆ? ತಾನು ಸಾಕಿದ ಹಸು ಗಂಡು ಕರು ಹಾಕಿದಾಗ, ಹಸುವಿಗೆ ವಯಸ್ಸಾದಾಗ, ಕಾಯಿಲೆ ಬಿದ್ದಾಗ ಅದರ ನಿರ್ವಹಣೆ ಕಷ್ಟ. ಈಗಾಗಲೇ ಸಂಕಷ್ಟದಲ್ಲಿರುವ ರೈತನಿಗೆ ಈ ಹೊರೆ ಜೀವನ್ಮರಣದ ಪ್ರಶ್ನೆಯಾಗಲೂಬಹುದು ಎಂಬುದನ್ನು ಸರ್ಕಾರ ಮರೆತಂತಿದೆ ಎಂದು ಹೆಚ್ಡಿಕೆ ಬೊಟ್ಟುಮಾಡಿದ್ದಾರೆ.
ಸರ್ಕಾರ ಜಾರಿಗೆ ತರಲು ಹೊರಟಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ರೈತ ದೃಷ್ಟಿಕೋನದಿಂದ ಇಲ್ಲಿ ಪರಾಮರ್ಶೆ ಮಾಡಲಾಗಿದೆ. ಪರಮಾರ್ಶೆ ವೇಳೆ ಮೂಡಿದ ಪ್ರಶ್ನೆಗಳನ್ನು ಇಲ್ಲಿ ಪ್ರಸ್ತಾಪಿಸಲಾಗಿದೆ. 1/14
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 10, 2020
ಸರ್ಕಾರ ಗೋಹತ್ಯೆ ನಿಷೇಧಿಸುವ ಕಾಯ್ದೆಯನ್ನು ರೂಪಿಸಿದೆ. ಆದರೆ, ಗೋಹತ್ಯೆ ನಿಷೇಧದ ಜೊತೆಗೆ ಗೋಮಾತೆಯನ್ನು ರಕ್ಷಿಸುವ, ಗೋಮಾತೆಯನ್ನೇ ನಂಬಿದ ರೈತರನ್ನು ರಕ್ಷಿಸುವ ಕಾನೂನಾಗಿಯೂ ಇವತ್ತಿನ ಈ ಕಾಯ್ದೆ ವರ್ತಿಸಬೇಕು ಎಂಬುದು ರೈತರ ಪ್ರತಿನಿಧಿಯಾದ ಜೆಡಿಎಸ್‌ನ ಒತ್ತಾಯ. ಈ ವಿಚಾರವಾಗಿ ಯಾರದ್ದೂ ತಕರಾರು ಇಲ್ಲ ಎಂದು ನಾವು ಭಾವಿಸುತ್ತೇವೆ. 3/14
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 10, 2020
ನಾವೆಲ್ಲರೂ ಹಸುಗಳನ್ನು ಪೂಜಿಸುತ್ತೇವೆ. ಆದರೆ, ರೈತ ಮಾತ್ರ ಅದನ್ನು ಪೋಷಿಸುವ ಹೊಣೆ ಹೊತ್ತಿದ್ದಾನೆ. ಮತ್ತು, ಅದರ ಮೇಲೆಯೇ ಅವನ ಜೀವನ ನಿರ್ವಹಣೆಯೂ ಅವಲಂಬಿತವಾಗಿದೆ. ಗೋವಿನ ಪೋಷಣೆ ಎಂಬುದೇ ಆರ್ಥಿಕ ಹೊರೆಗೆ ಕಾರಣವಾದರೆ, ಆತನ ನೆರವಿಗೆ ನಿಲ್ಲುವವರು ಯಾರು? ಇದು ಸಾಮಾನ್ಯ ರೈತನಿಗೆ ಇರುವ ಪ್ರಶ್ನೆ. ಸರ್ಕಾರ ಇದಕ್ಕೆ ಪರಿಹಾರ ಹುಡುಕಬೇಕು. 4/14
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 10, 2020
ರೈತ ತಾನು ಪೂಜಿಸುವ, ಪೋಷಿಸುವ, ಜೀವನಾಧಾರವನ್ನಾಗಿ ನಂಬಿರುವ ಗೋವು ಈ ಕಾಯ್ದೆ ಮೂಲಕ ಆತನಿಗೆ ಹೇಗೆ ಹೊರೆಯಾಗುತ್ತದೆ? ತಾನು ಸಾಕಿದ ಹಸು ಗಂಡು ಕರು ಹಾಕಿದಾಗ, ಹಸುವಿಗೆ ವಯಸ್ಸಾದಾಗ, ಕಾಯಿಲೆ ಬಿದ್ದಾಗ ಅದರ ನಿರ್ವಹಣೆ ಕಷ್ಟ. ಈಗಾಗಲೇ ಸಂಕಷ್ಟದಲ್ಲಿರುವ ರೈತನಿಗೆ ಈ ಹೊರೆ ಜೀವನ್ಮರಣದ ಪ್ರಶ್ನೆಯಾಗಲೂಬಹುದು ಎಂಬುದನ್ನು ಸರ್ಕಾರ ಮರೆತಂತಿದೆ. 5/14
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 10, 2020
ರೈತರು ಈಗ ಹಾಲು ಉತ್ಪಾದನೆಗಾಗಿ ಪೋಷಿಸುತ್ತಿರುವ ಹಸುಗಳ ಗಂಡು ಕರುಗಳನ್ನು ಸಾಕುವುದು ಆರ್ಥಿಕವಾಗಿ ಹೊರೆ. ಅದು ಬೆಳೆದರೂ ಕೃಷಿ ಕಾರ್ಯಗಳಿಗೆ ಬಳಕೆಗೆ ಯೋಗ್ಯವಲ್ಲ. ಹೀಗಾದಾಗ ಹೈನುಗಾರಿಕೆಗೆ ಹೊಡೆತ ಬೀಳುತ್ತದೆ. ಕ್ರಮೇಣ ರೈತರು ಹೈನುಗಾರಿಕೆಯಿಂದಲೇ ವಿಮುಖವಾಗಬಹುದು. ಅದು ಮತ್ತೊಂದು ಸಮಸ್ಯೆಗೆ ಕಾರಣವಾಗಬಹುದು ಎಂಬುದನ್ನು ಗಮನಿಸಲೇಬೇಕು. 6/14
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 10, 2020
ಸದ್ಯ ಸರ್ಕಾರ ತಂದಿರುವ ಕಾಯ್ದೆಯು ರೈತರು ಗಂಡು ಕರುಗಳನ್ನು, ವಯಸ್ಸಾದ ರಾಸುಗಳನ್ನು, ರೋಗಕ್ಕೀಡಾದ ಹಸುಗಳನ್ನು ಪೋಷಿಸಲೇಬೇಕಾದ ಷರತ್ತಿಗೆ ದೂಡುತ್ತದೆ. ಪ್ರಾಯೋಗಿಕವಲ್ಲದ ಷರತ್ತುಗಳ ಮೂಲಕ ಸರ್ಕಾರ ರೈತರ ಮೇಲೆ ಹೆಚ್ಚಿನ ಒತ್ತಡ ಹೇರಲು ಪ್ರಯತ್ನಿಸಿದರೆ, ರೈತರು ಹೈನುಗಾರಿಕೆಯಿಂದ ದೂರ ಸರಿಯಬಹುದು. ಆಗ ಹಾಲು ಉತ್ಪಾದನೆಗೆ ಹೊಡೆತ ಬೀಳಲಿದೆ.7/14
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 10, 2020
ಜಾನುವಾರುಗಳನ್ನು ಸೂಕ್ತ ಪ್ರಾಧಿಕಾರದ ಪರವಾನಗಿ ಪಡೆದು ವಧೆ ಮಾಡಬಹುದು. ಇದಕ್ಕೆ ಪಶು ವೈದ್ಯಾಧಿಕಾರಿಯ ಪ್ರಮಾಣ ಪತ್ರ ಬೇಕು ಎಂದು ಹೇಳಲಾಗಿದೆ. ಚಿಕಿತ್ಸೆಗೇ ಈಗ ಪಶುವೈದ್ಯರ ಲಭ್ಯತೆ ಇಲ್ಲ. ಇನ್ನು ಪ್ರಮಾಣ ಪತ್ರಕ್ಕೆ ಲಭ್ಯರಾಗುವರೇ? ಪ್ರಮಾಣ ಪತ್ರ, ಅನುಮತಿ ಪಡೆಯುವ ಪ್ರಕ್ರಿಯೆ ದಂಧೆಯ ರೂಪ ತಾಳದೇ? ರೈತರ ಶೋಷಣೆ ನಡೆಯುವುದಿಲ್ಲವೇ?8/14
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 10, 2020
ಪೊಲೀಸರು, ಅಧಿಕಾರಿಗಳಿಗೆ ರೈತರ ಡೈರಿ ಪರಿಶೀಲನೆಯ ಅವಕಾಶ ನೀಡಲಾಗಿದೆ. ಇದರಿಂದ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡುವ ಸಾಧ್ಯತೆಗಳು ಸೃಷ್ಟಿಯಾಗುವ ಆತಂಕವಿದೆ. ರೈತರಲ್ಲಿ ಭಯದ ವಾತಾವರಣವೂ ಮೂಡುತ್ತದೆ. ಈ ನಿಯಮವನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ. ಇದು ಹಳ್ಳಿಗಳ ಸೌಹಾರ್ದ ವಾತಾವರಣವನ್ನೇ ಹಾಳುಮಾಡಬಹುದಲ್ಲವೇ?9/14
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 10, 2020
ಜಾನುವಾರುಗಳನ್ನು ಸಾಗಿಸಲು ಪಶುಸಂಗೋಪನಾ ಇಲಾಖೆಯ ಅನುಮತಿ ಪಡೆಯಬೇಕು ಎಂದು ಹೇಳಲಾಗಿದೆ. ಇದು ಮುಂದೊಂದು ದಿನ ಲೈಸನ್ಸ್ ರಾಜ್ ಪದ್ಧತಿಗೆ ಕಾರಣವಾಗದೇ? ಅಧಿಕಾರಿಗಳು ಇದರಲ್ಲಿ ಭ್ರಷ್ಟಾಚಾರ ನಡೆಸದೇ ಇರಲಾರರು ಎಂದು ಹೇಳಲು ಸಾಧ್ಯವೇ? ಒಂದು ವೇಳೆ ಇಂಥ ಪರವಾನಗಿಗೆ ರೈತರಿಂದ ಲಂಚ ಪಡೆಯುವ ಪರಿಸ್ಥಿತಿ ಸೃಷ್ಟಿಯಾದರೆ ಅದು ರೈತರ ಶೋಷಣೆಯಾಗದೇ?10/14
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 10, 2020