ಶ್ರೀಸಂಸ್ಥಾನ ಗೋಕರ್ಣ ಪರ್ತಗಳಿ ಜೀವೊತ್ತಮ್ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿಯವರು ಇಂದು ಬೆಳಿಗ್ಗೆ ಹರಿಪಾದ ಸೇರಿದರು. ಅಪಾರ ಸಂಖ್ಯೆಯಲ್ಲಿ ಭಕ್ತರನ್ನು ಹೊಂದಿರುವ ಶ್ರೀಗಳು ಅನೇಕ ಧಾರ್ಮಿಕ ಸನ್ನಿವೇಶಗಳಲ್ಲಿ ಮುಂಚೂಣಿಯಲ್ಲಿದ್ದರು.
ಪೇಜಾವರ ಶ್ರೀ ದುಃಖ:
ಗೋಕರ್ಣ ಪರ್ತಗಳಿ ಜೀವೊತ್ತಮ್ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ ನಿಧನಕ್ಕೆ ಪೇಜಾವರ ಮಠಾಧೀಶ ವಿಶ್ವ ಪ್ರಸನ್ನ ತೀರ್ಥರು ಸೇರಿದಂತೆ ಅನೇಕ ಯತಿಗಳು, ಧಾರ್ಮಿಕ ಪ್ರಮುಖರು ದುಃಖ ವ್ಯಕ್ತಪಡಿಸಿದ್ದಾರೆ.
ಶ್ರೀಗಳು ಮಧ್ವ ಸಿದ್ದಾಂತದ ಬಗ್ಗೆ ವಿಶೇಷ ನಿಷ್ಠೆ ಹೊಂದಿದ್ದು, ಸಮಾಜಕ್ಕೂ ಉತ್ತಮ ಮಾರ್ಗದರ್ಶಕರಾಗಿದ್ದರು ಎಂದಿರುವ ಪೇಜಾವರ ಮಠಾಧೀಶರು, ವಿದ್ಯಾವಾಧಿರಾಜವಡೇರ್ ಸ್ವಾಮೀಜಿಯವರು ಪೇಜಾವರದ ವಿಶ್ವೇಶ ತೀರ್ಥರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು ಎಂದು ನೆನಪಿಸಿಕೊಂಡಿದ್ದಾರೆ.
ಕಾಗೇರಿ, ನಳಿನ್ ಕುಮಾರ್ ಶೋಕ:
ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಶ್ರೀ ವಿಧ್ಯಾಧಿರಾಜ ತೀರ್ಥ ಶ್ರೀಪಾದ ವಡೇರ್ ಅವರು ನಮ್ಮನ್ನಗಲಿರುವ ವಿಷಯ ತಿಳಿದು ಅತೀವ ದುಃಖವಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಾಪ ಸೂಚಿಸಿದ್ದಾರೆ. ಪರಮಪೂಜ್ಯರು, ಮಹಾನ್ ದೈವಭಕ್ತರಾಗಿದ್ದು, ದೇವರ ಧ್ಯಾನ, ಪೂಜೆ, ಅನುಷ್ಠಾನದಲ್ಲಿ ತಲ್ಲೀನರಾಗುತ್ತಿದ್ದರು. ದೇಶ, ಧರ್ಮ, ಸಮಾಜದ ಬಗ್ಗೆಯೂ ಅತೀವ ಕಾಳಜಿಯನ್ನು ಹೊಂದಿದ್ದ ಪೂಜ್ಯರು, ಸಮಾಜ ಬಾಂಧವರನ್ನು ತಮ್ಮ ಆಶೀರ್ವಚನದ ಮೂಲಕ ಸನ್ಮಾರ್ಗದಲ್ಲಿ ಕೊಂಡೊಯ್ಯುತ್ತಿದ್ದರು. ಪೂಜ್ಯರ ದರ್ಶನ ಪಡೆದ ಸಂದರ್ಭದಲ್ಲಿ ನನ್ನನ್ನು ಮನಃಪೂರ್ವಕವಾಗಿ ಆಶೀರ್ವದಿಸಿದ್ದನ್ನು ಈ ,ಸಂದರ್ಭದಲ್ಲಿ ಸ್ಮರಿಸಿಕೊಳ್ಳುತ್ತೇನೆ ಎಂದವರು ಹೇಳಿದ್ದಾರೆ.
ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ್ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ. pic.twitter.com/77BTycAy22
— BJP Karnataka (@BJP4Karnataka) July 19, 2021
ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿಯವರು ಇಂದು ಬೆಳಿಗ್ಗೆ ಹರಿಪಾದ ಸೇರಿದ್ದು, ಇದರಿಂದ ಸಮಾಜವು ಒಬ್ಬ ಶ್ರೇಷ್ಠ ಸಂತರನ್ನು ಕಳೆದುಕೊಂಡಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸ್ವಾಮೀಜಿಗಳ ಶಿಷ್ಯವರ್ಗ ಮತ್ತು ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ನಳಿನ್‍ಕುಮಾರ್ ಕಟೀಲ್ ಅವರು ಪ್ರಾರ್ಥಿಸಿದ್ದಾರೆ.