ಬೆಂಗಳೂರು: ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡಿ ಸರ್ಕಾರ ಸಿಹಿ ಸುದ್ದಿ ನೀಡಿದೆ. ಆಶಾ ಗೌರವ ಧನವನ್ನು ರೂ.1,000 ಹೆಚ್ಚಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್ ನಲ್ಲಿ ಭರವಸೆ ನೀಡಿದ್ದರು. ಅದರಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ವೇಳೆ, ಆರೋಗ್ಯ ಸಿಬ್ಬಂದಿ, ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಗೌರವ ಧನವನ್ನೂ ಏರಿಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.