ಬೆಂಗಳೂರು: ಕೆಎಎಸ್ ಸಹಿತ ಗೆಜೆಟೆಡ್ ಪ್ರೊಬೇಷನರ್ಗಳ ಹುದ್ದೆಗಳಿಗೆ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 3 ವರ್ಷ ಹೆಚ್ಚುವರಿಯಾಗಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ರಾಜ್ಯದಲ್ಲಿ ಖಾಲಿ ಇರುವ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡುವ ಕಾರ್ಯ ಹಲವು ವರ್ಷಗಳಿಂದ ಆಗಿರಲಿಲ್ಲ. ಜೊತೆಗೆ ಕೋವಿಡ್ ಕಾರಣಗಳಿಗೆ ನೇಮಕಾತಿ ವಿಳಂಬವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸಂಪುಟ ಈ ತೀರ್ಮಾನವನ್ನು ಕೈಗೊಂಡಿದೆ.
2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿ ವೇಳೆ ಒಂದು ಬಾರಿಗೆ ಮಾತ್ರ ಗರಿಷ್ಠ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲು ಈ ತೀರ್ಮಾನ ಕೈಗೊಳ್ಳಲಾಗಿದೆ.
ಗರಿಷ್ಟ ವಯೋಮಿತಿ ಹೀಗಿರುತ್ತೆ:
-
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ
-
ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 41 ವರ್ಷ
-
ಪ.ಜಾತಿ, ಪ.ವ,. ಪ್ರವರ್ಗ-1 ಅಭ್ಯರ್ಥಿಗಳಿಗೆ 43 ವರ್ಷ
ಈ ವರ್ಷ ಕರ್ನಾಟಕ ಸರ್ಕಾರದ 16 ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ ಸುಮಾರು 504 ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ ನಡೆದಿದೆ.




















































