ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗೆ ‘ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ – KSRTC ಆರೋಗ್ಯ ಕಾರ್ಯಕ್ರಮ’ ಸೋಮಾವರ ಅನುಷ್ಠಾನಗೊಳ್ಳಲಿದೆ. ಸೋಮವಾರ (06.01.2025) ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಈ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ ಸಿಗಲಿದೆ.
ಶೀಘ್ರವೇ ಕನ್ನಡದಲ್ಲೂ ಬರಲಿದೆ
ದೇಶದ ಪ್ರತಿಷ್ಠಿತ ಮಾಧ್ಯಮ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ವರ್ಗಕ್ಕೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ‘KSRTC ಆರೋಗ್ಯ’ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್, ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಶಾಸಕರ ಉಪಸ್ಥಿತಿಯಲ್ಲಿ ಈ ಸಮಾರಂಭ ನಡೆಯಲಿದೆ.
ಈ ಸಮಾರಂಭದಲ್ಲಿ ಸಚಿವರು, ಸಂಸದರು, ಶಾಸಕರು ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗಿನ ಒಡಂಬಡಿಕೆ ಜಾರಿಗೆ ಬರಲಿದೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ.