ಬೆಂಗಳೂರು: ರಾಜ್ಯದ ಜನರಿಗೂ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಸಹಿತ ಸಾರಿಗೆ ನಿಗಮಗಳ ನೌಕರರಿಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸಿಹಿ ಸುದ್ದಿ ನೀಡಿದ್ದಾರೆ. ಅವರ ಪ್ರಯತ್ನ ಸಾಕಾರಗೊಂಡಿದ್ದು, ಪರಿಹಾರ ಹಾಗೂ ವಿಮಾ ಯೋಜನೆ ತಕ್ಷಣದಿಂದ ಜಾರಿಗೆ ಬರುತ್ತಿದೆ.
ಕೆಎಸ್ಆರ್ಟಿಸಿ, ಬಿಎಂಟಿಸಿ ಸಹಿತ ಸಾರಿಗೆ ನಿಗಮಗಳ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಹಾಗೂ ಸಾರಿಗೆ ನಿಗಮಗಳ ನೌಕರರು ಮೃತಪಟ್ಟರೆ ಅವಲಂಬಿತರಿಗೆ ಒಂದು ಕೋಟಿ ರೂಪಾಯಿ ಪರಿಹಾರ ನೀಡುವ ಯೋಜನೆ ಜಾರಿಗೆ ಬಂದಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರ ಕಚೇರಿ ಮೂಲಗಳು ತಿಳಿಸಿವೆ.
KSRTC, BMTC ಬಸ್ ಚಾಲಕರ ನಿರ್ಲಕ್ಷ್ಯದಿಂದಾಗುವ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರು ಪರಿಹಾರಕ್ಕಾಗಿ ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸಬೇಕಿತ್ತು. ಇದೀಗ ಅಂತಹಾ ಅಲೆದಾಟ ಇಲ್ಲದೆಯೇ ಅವಲಂಬಿತರಿಗೆ ಪರಿಹಾರ ನೀಡುವ ಮಹತ್ವದ ಕ್ರಮಕ್ಕೆ ಸಾರಿಗೆ ಸಚಿವರು ಆದೇಶಿಸಿದ್ದಾರೆ. ಬಸ್ ಅಪಘಾತದಲ್ಲಿ ಮೃತಪಟ್ಟವರ ಅವಲಂಬಿತರಿಗೆ ಹತ್ತು ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ.
ಇದೇ ವೇಳೆ, ಕರ್ತವ್ಯದಲ್ಲಿದ್ದಾಗ ಚಾಲಕರು-ನಿರ್ವಾಹಕರು ಮೃತಪಟ್ಟರೆ ಅವರ ಕುಟುಂಬದವರಿಗೂ ಒಂದು ಕೋಟಿ ರೂಪಾಯಿ ಪರಿಹಾರ ಸಿಗಲಿದೆ. ಈ ಹಿಂದೆ, ಈ ಪರಿಹಾರ ಮೊತ್ತ ಮೂರು ಲಕ್ಷ ರೂಪಾಯಿಗಳಿಗೆ ಸೀಮಿತವಾಗಿತ್ತು. ನೀಡಲಾಗ್ತಿತ್ತು.