ಬೆಂಗಳೂರು: ಅತ್ಯಂತ ಕೊಳಕು ಭಾಷೆ ಯಾವುದು? ಎಂದು ಗೂಗಲ್‌ನಲ್ಲಿ ಹುಡುಕಾಡಿದರೆ ಸಿಗುತ್ತಿದ್ದುದು ‘ಕನ್ನಡ’.
ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕನ್ನಡಿಗರು ತಿರುಗಿಬಿದ್ದಿದ್ದಾರೆ. ರಾಜಕಾರಣಿಗಳು, ಸಂಘ ಸಂಸ್ಥೆಗಳ ಪ್ರಮುಖರ ಸಹಿತ ವಿವಿಧ ವಲಯಗಳಿಂದ ಈ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.
ಗೂಗಲ್ ಬಗ್ಗೆ ರಾಜ್ಯ ಸರ್ಕಾರ ಕೂಡಾ ಆಕ್ರೋಶ ಹೊರಹಾಕಿದೆ. 2500 ವರ್ಷಗಳ ಹಿಂದೆಯೇ ಕನ್ನಡ ಭಾಷೆ ಅಸ್ತಿತ್ವದಲ್ಲಿತ್ತು ಎಂದು ಸಾಬೀತಾಗಿದೆ. ಜೊತೆಗೆ ಕನ್ನಡಕ್ಕೆ ತನ್ನದೇ ಆದ ಇತಿಹಾಸವಿದ್ದು, ಕನ್ನಡ ಭಾಷೆ ಕನ್ನಡಿಗರ ಹೆಮ್ಮೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಪ್ರತಿಕ್ರಿಯಿಸಿದ್ದಾರೆ.
2500 ವರ್ಷಗಳ ಹಿಂದೆಯೇ ಕನ್ನಡ ಭಾಷೆ ಅಸ್ತಿತ್ವದಲ್ಲಿತ್ತು ಎಂದು ಸಾಬೀತಾಗಿದೆ. ಜೊತೆಗೆ ಕನ್ನಡಕ್ಕೆ ತನ್ನದೇ ಆದ ಇತಿಹಾಸವಿದ್ದು, ಕನ್ನಡ ಭಾಷೆ ಕನ್ನಡಿಗರ ಹೆಮ್ಮೆ.#kannada
— Aravind Limbavali (Modi Ka Parivar) (@ArvindLBJP) June 3, 2021
ಸರಣಿ ಟ್ವೀಟ್ ಮಾಡಿರುವ ಸಚಿವ ಅರವಿಂದ ಲಿಂಬಾವಳಿ, ಭಾರತದಲ್ಲಿ ಕೆಟ್ಟ(ugliest) ಭಾಷೆ ಎಂದರೆ ನಮ್ಮ ನುಡಿಯಾದ ಕನ್ನಡ ಎಂದು ಉತ್ತರ ಬರುತ್ತಿದೆ ಹೀಗಾಗಿ ಗೂಗಲ್ ಸಂಸ್ಥೆಯು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲಸ ಮಾಡಿದೆ, ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ಗೂಗಲ್ ಕನ್ನಡಿಗರ ಕ್ಷಮೆ ಕೇಳಬೇಕು. ಕನ್ನಡ ಭಾಷೆಯ ಕುರಿತು ಅಪಪ್ರಚಾರ ಮಾಡಿದ ಗೂಗಲ್ ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಆದರೆ ಭಾರತದಲ್ಲಿ ಕೆಟ್ಟ(ugliest) ಭಾಷೆ ಎಂದರೆ ನಮ್ಮ ನುಡಿಯಾದ ಕನ್ನಡ ಎಂದು ಉತ್ತರ ಬರುತ್ತಿದೆ ಹೀಗಾಗಿ @Google ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲಸ ಮಾಡಿದೆ, ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ಗೂಗಲ್ ಕನ್ನಡಿಗರ ಕ್ಷಮೆ ಕೇಳಬೇಕು. ಕನ್ನಡ ಭಾಷೆಯ ಕುರಿತು ಅಪಪ್ರಚಾರ ಮಾಡಿದ @Google ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.
— Aravind Limbavali (Modi Ka Parivar) (@ArvindLBJP) June 3, 2021