ಬೆಂಗಳೂರು: KWIN City, ಲಕ್ಷಾಂತರ ಕೋಟಿ ಬಂಡವಾಳ ಹೂಡಿಕೆ, ಗ್ಲೋಬಲ್ ಹಬ್, ಪ್ರಗತಿಯಮರುಕಲ್ಪನೆ ಎಂದು ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ಬೊಬ್ಬೆ ಹೊಡೆಯುತ್ತಿರುವ ಈ ಸಂದರ್ಭದಲ್ಲಿ, ನಮ್ಮ ಉತ್ತರ ಕರ್ನಾಟಕದ ಆಸ್ಪತ್ರೆಗಳ ದುಸ್ಥಿತಿ ಅನಾವರಣವಾಗಿದೆ.
KWIN City, ಲಕ್ಷಾಂತರ ಕೋಟಿ ಬಂಡವಾಳ ಹೂಡಿಕೆ, ಗ್ಲೋಬಲ್ ಹಬ್, #ಪ್ರಗತಿಯಮರುಕಲ್ಪನೆ ಎಂದು ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ಬೊಬ್ಬೆ ಹೊಡೆಯುತ್ತಿರುವ ಈ ಸಂದರ್ಭದಲ್ಲಿ, ನಮ್ಮ ಉತ್ತರ ಕರ್ನಾಟಕದ ಆಸ್ಪತ್ರೆಗಳ ದುಸ್ಥಿತಿ ಇದು!
ಈಗಾಗಲೇ ನೂರಾರು ಬಾಣಂತಿಯರು ಇದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರೂ, ಇನ್ನೂ ಎಚ್ಚೆತ್ತಿಲ್ಲದಿರವುದು ನಮ್ಮ… pic.twitter.com/e885sKwlNj
— Arvind Bellad (@BelladArvind) February 13, 2025
ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಅವರು ಈ ಕುರಿತಂತೆ ವೀಡಿಯೋವೊಂದನ್ನು ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಮಾಡಿದ್ದು, ಆಸ್ಪತ್ರೆಗಳ ಅವ್ಯವಸ್ಥೆಗೆ ಹೊಣೆಗಾರರಾಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.
ಈಗಾಗಲೇ ನೂರಾರು ಬಾಣಂತಿಯರು ಇದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರೂ, ಇನ್ನೂ ಎಚ್ಚೆತ್ತಿಲ್ಲದಿರವುದು ನಮ್ಮ ಉತ್ತರ ಕರ್ನಾಟಕದೆಡೆಗಿನ ಈ ನಿರ್ಲಜ್ಜ ಕಾಂಗ್ರೆಸ್ ಸರ್ಕಾರದ ಅಸಡ್ಡೆಯನ್ನು ಈ ಘಟನೆ ಎತ್ತಿ ತೋರಿಸಿದೆ ಎಂದು ಅರವಿಂದ್ ಬೆಲ್ಲದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿಯ BMC&R ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡಿನಲ್ಲಿ ವೈದ್ಯರು ಮೊಬೈಲ್ ಟಾರ್ಚ್ ಹಿಡಿದುಕೊಂಡು ಚಿಕಿತ್ಸೆ ನೀಡುವಂತಹ ಪರಿಸ್ಥಿತಿಯನ್ನು ಈ ಬೇಜವಾಬ್ದಾರಿ ಸರ್ಕಾರ ತಂದಿಟ್ಟಿದೆ. ಈ ಕೂಡಲೇ ರಾಜ್ಯ ಸರ್ಕಾರ, ಇತ್ತ ಗಮನಹರಿಸಿ ಬಡಜೀವಗಳ ಉಳಿಸಬೇಕೆಂದು ಕೈಮುಗಿದು ವಿನಂತಿಸುತ್ತೇನೆ ಎಂದವರು ಹೇಳಿದ್ದಾರೆ.
ರಾಜ್ಯದಲ್ಲಿ ಆರೋಗ್ಯ ಇಲಾಖೆಯನ್ನೇ ಕೋಮಾ ಸ್ಥಿತಿಗೆ ತಂದಿಟ್ಟು, ಈ ಎಲ್ಲಾ ಅವಾಂತರಗಳಿಗೆ ಕಾರಣರಾದ, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರ ರಾಜೀನಾಮೆ ಪಡೆಯಬೇಕೆಂದು ಸಿದ್ದರಾಮಯ್ಯ ಅವನ್ನು ಅರವಿಂದ್ ಬೆಲ್ಲದ್ ಆಗ್ರಹಿಸಿದ್ದಾರೆ.