ಮಂಗಳೂರು: ಬಂದರು ನಗರಿ ಮಂಗಳೂರಿನಲ್ಲಿ ರಸ್ತೆ ಮಧ್ಯೆ ನಮಾಜ್ ಮಾಡಿದ ಯುವಕರ ನಡೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಘಟನೆಯನ್ನು ಖಂಡಿಸಿರುವ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ರಸ್ತೆಯಲ್ಲಿ ನಮಾಜ್ ಮಾಡುವವರ ಮೇಲೆ ಸರ್ಕಾರಕ್ಕೆ ಅತೀವ ‘ಪ್ರೀತಿ’ ಎಂದು ಕಾಂಗ್ರೆಸ್ ಬಗ್ಗೆ ಲೇವಡಿ ಮಾಡಿದ್ದಾರೆ.
ಮಂಗಳೂರಿನ ಹೃದಯಭಾಗದಲ್ಲಿ ಹಾಡುಹಗಲೇ ರಸ್ತೆಯನ್ನು ಬ್ಲಾಕ್ ಮಾಡಿ, ನಮಾಜು ಮಾಡುತ್ತಾ, ವಾಹನ ಸಂಚಾರಕ್ಕೆ, ಪಾದಚಾರಿಗಳಿಗೆ ಅಡ್ಡಿಪಡಿಸುವ ಮಟ್ಟಕ್ಕೆ ಪರಿಸ್ಥಿತಿ ತಲುಪಿರುವುದು ರಾಜ್ಯದ ಕಾಂಗ್ರೆಸ್ ಸರಕಾರದ ಸ್ವೇಚ್ಚಾಚಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿ.
ನಾವು ಕಾನೂನು, ನೀತಿ, ನಿಯಮ ಯಾವುದನ್ನು ಕ್ಯಾರ್ ಮಾಡುವುದಿಲ್ಲ ಎನ್ನುವ ಧೋರಣೆ… pic.twitter.com/OKSq7mxytx
— Nalinkumar Kateel (@nalinkateel) May 27, 2024
ಮಂಗಳೂರಿನ ಹೃದಯಭಾಗದಲ್ಲಿ ಹಾಡುಹಗಲೇ ರಸ್ತೆಯನ್ನು ಬ್ಲಾಕ್ ಮಾಡಿ, ನಮಾಜು ಮಾಡುತ್ತಾ, ವಾಹನ ಸಂಚಾರಕ್ಕೆ, ಪಾದಚಾರಿಗಳಿಗೆ ಅಡ್ಡಿಪಡಿಸುವ ಮಟ್ಟಕ್ಕೆ ಪರಿಸ್ಥಿತಿ ತಲುಪಿರುವುದು ರಾಜ್ಯದ ಕಾಂಗ್ರೆಸ್ ಸರಕಾರದ ಸ್ವೇಚ್ಚಾಚಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿ ಎಂದು ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.
ನಾವು ಕಾನೂನು, ನೀತಿ, ನಿಯಮ ಯಾವುದನ್ನು ಕ್ಯಾರ್ ಮಾಡುವುದಿಲ್ಲ ಎನ್ನುವ ಧೋರಣೆ ಕೆಲವರಲ್ಲಿ ಸೃಷ್ಟಿಯಾಗಲು ಕಾಂಗ್ರೆಸ್ ಸರಕಾರ ಅಂತವರ ಮೇಲೆ ತೋರಿಸುತ್ತಿರುವ ವಿಶೇಷ ‘ಪ್ರೀತಿ’ಯೇ ಕಾರಣ ಎಂದವರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಪೋಸ್ಟ್ ಗಮನಸೆಳೆದಿದೆ.