ಬೆಂಗಳೂರು: ಕೋವಿಡ್ ಗೆ ಹಾಸಿಗೆ ಮೀಸಲಿಡಲು ಖಾಸಗಿ ಆಸ್ಪತ್ರೆಗಳಿಗೆ ಈಗಾಗಲೇ ಸರ್ಕಾರ ಮನವಿ ಮಾಡಿದೆ. ಕಳೆದ 15 ದಿನಗಳಿಂದ ಕೋರುತ್ತಿದ್ದರೂ ಕೆಲವು ಆಸ್ಪತ್ರೆಗಳು 15-20% ಹಾಸಿಗೆ ಮಾತ್ರ ನೀಡಿವೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾನಾಡುತ್ತಾ ಈ ಕುರಿತಂತೆ ಅವರು ಮಾಹಿತಿ ಹಂಚಿಕೊಂಡರು. ಖಾಸಗಿ ಆಸ್ಪತ್ರಗಳ ನಿರ್ಲಕ್ಷ್ಯ ಬಗ್ಗರ ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ಖಾಸಗಿ ಆಸ್ಪತ್ರೆಗಳು ಎಚ್ಚೆತ್ತುಕೊಳ್ಳದಿದ್ದರೆ, ಕಳೆದ ವರ್ಷದಂತೆಯೇ ಗಂಭೀರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದರು.
ಕೋವಿಡ್ ರೋಗಿಗಳ ಪೈಕಿ ತುರ್ತು ಇರುವವರಿಗೆ ಮಾತ್ರ ಚಿಕಿತ್ಸೆ ನೀಡಲೇಬೇಕು. ಕೋವಿಡ್ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಸಿಗದಿದ್ದರೆ ಸರ್ಕಾರ ಸುಮ್ಮನಿರಲು ಸಾಧ್ಯವಿಲ್ಲ. ಆದರೂ ಈಗ ಖಾಸಗಿ ಆಸ್ಪತ್ರೆಗಳು ಸರ್ಕಾರದೊಂದಿಗೆ ನಿಲ್ಲಬೇಕು ಎಂದು ಮನವಿ ಮಾಡುತ್ತೇನೆ ಎಂದವರು ಹೇಳಿದರು.
ಹೋಟೆಲ್ ಗಳಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಬೇಕು. ಕಾರ್ಪೊರೇಟ್ ಆಸ್ಪತ್ರೆಗಳು ಈ ವ್ಯವಸ್ಥೆ ಮಾಡಬೇಕು. ಗಂಭೀರ ರೋಗಿಗಳಿಗೆ ಮಾತ್ರ ಆಸ್ಪತ್ರೆಗೆ ದಾಖಲಿಸಬೇಕು ಎಂದು ಸೂಚಿಸಲಾಗಿದೆ ಎಂದವರು ತಿಳಿಸಿದರು.