ಬೆಂಗಳೂರು: ಕುರುಬ ಸಮುದಾಯದ ರೀತಿಯಲ್ಲೇ ಒಕ್ಕಲಿಗ ಸಮುದಾಯದವರೂ ಮೀಸಲಾತಿ ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ. ಬೆಂಗಳೂರಿನಲ್ಲಿ ಈ ಸಂಬಂಧ ನಡೆದ ಸಭೆ ಕುತೂಹಲದ ಕೇಂದ್ರಬಿಂದುವಾಯಿತು.
ವಿಜಯನಗರದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿಂದು ಚಿಂತನ ಮಂಥನ ನಡೆಯಿತು. ‘ಒಕ್ಕಲಿಗರಿಗೆ ಮೀಸಲಾತಿ ನೀಡುವುದು ಏಕೆ, ಹೇಗೆ ‘ಚಿಂತನ-ಮಂಥನ ಸಭೆಯಲ್ಲಿ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀ ನಂಜಾವಧೂತ ಸ್ವಾಮೀಜಿ, ನಿವೃತ್ತ ನ್ಯಾಯಾೀಶ ಚಂದ್ರಶೇಖರ್, ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್ ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.