ಬಹುಕಾಲದ ನಂತರ ಪತ್ರಕರ್ತ ಇಂದ್ರಜಿತ್ ಲಂಕೇಶ್ ಅವರು ಒಂದು ಉತ್ತಮ ಸಿನಿಮಾವನ್ನು ಮಾಡುತ್ತಿದ್ದಾರೆ ಎಂಬ ಮಾತುಗಳು ಗಾಂಧೀನಗರದಲ್ಲಿ ಪ್ರತಿಧ್ವನಿಸುತ್ತಲೇ ಇದೆ. ಅದೇ ಸಂದರ್ಭದಲ್ಲಿ ಗೌರಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ನಿರ್ದೇಶಕ ಇಂದ್ರಜಿತ್ ಲಂಕೇಶ್ ತಮ್ಮ ಪುತ್ರ ಸಮರ್ಜಿತ್ ಲಂಕೇಶ್ ಗಾಗಿ ‘ಗೌರಿ’ ಚಿತ್ರ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಸಿನಿಮಾವನ್ನು ಇಂದ್ರಜಿತ್ ಲಂಕೇಶ್ ಅವರೇ ನಿರ್ದೇಶಿಸುತ್ತಿದ್ದಾರೆ. ಇದೀಗ ಬಿಡುಗಡೆಯಾಗಿರುವ ‘ಗೌರಿ’ ಟೀಸರ್ ನೆಟ್ಟಿಗರ ಗಮನಕೇಂದ್ರೀಕರಿಸಿದೆ.




















































