ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ವಿಚಾರದಲ್ಲೂ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಈ ಸಂಬಂಧದ ಮಸೂದೆಗೆ ಅಂಕಿತ ಹಾಕಲು ರಾಜ್ಯಪಾಲರು ನಿರಾಕರಿಸಿದ್ದಾರೆ.
ವಿಧಾನಮಂಡಲದ ಉಭಯ ಸದನಗಳ ಅಂಗೀಕಾರದ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯನ್ನು ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾಗಿತ್ತು. ಆದರೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಈ ಮಸೂದೆಯನ್ನು ಕೆಲವು ಸ್ಪಷ್ಟನೆ ಕೇಳಿ ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ.
ಈ ಬೆಳವಣಿಗೆಯನ್ನು ಖಚಿತಪಡಿಸಿರುವ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ರಾಜ್ಯಪಾಲರು ಕೋರಿರುವಂತೆ ಸ್ಪಷ್ಟನೆಗಳೊಂದಿಗೆ ಪುನಃ ಒಪ್ಪಿಗೆ ಕೋರಿ ರಾಜ್ಯಪಾಲರಿಗೆ ಕಳುಹಿಸಲಾಗುವುದು’ ಎಂದು ತಿಳಿಸಿದ್ದಾರೆ.