ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜುಲೈ 19 ರಿಂದ ಆರಂಭವಾಗಲಿದೆ.
ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಗ್ರಾಮ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಬಿಬಿಎಂಪಿ ವಾರ್ಡ್ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದರು.
ಗೃಹಲಕ್ಷ್ಮೀ’ಯೋಜನೆಗೆ ನೋಂದಣಿಗೆ ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ, ಬ್ಯಾಂಕ್ ಖಾತೆಯ ಪಾಸ್ ಬುಕ್ ವಿವರ ಸಲ್ಲಿಕೆ ಕಡ್ಡಾಯವಾಗಿದೆ. ನೋಂದಣಿಗೆ ಯಾವುದೇ ಶುಲ್ಕ, ಯಾವುದೇ ಅಂತಿಮ ದಿನಾಂಕ ಮತ್ತು ಸಮಯ ನಿಗದಿಪಡಿಸಿಲ್ಲ ಎಂದ ಸಚಿವರು, ಪ್ರಜಾಪ್ರತಿನಿಧಿ ಮೂಲಕ ನೊಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರ ಮನೆಗೆ ತಲುಪಿಸಲಾಗುವುದು ಎಂದರು.
ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಫಲಾನುಭವಿಯ ಆಧಾರ್ ಜೋಡಣೆಯಾಗಿರುವ ಖಾತೆಗೆ ಡಿಬಿಟಿ ಮೂಲಕ ಹಣ ಜಮೆ ಮಾಡಲಾಗುತ್ತದೆ ಎಂದು ತಿಳಿಸಿದರು.