ಬೆಂಗಳೂರು: GSTಗೆ 4 ವರ್ಷವಾಗಿದ್ದಕ್ಕೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ತೆರಿಗೆ ಮೇಲಿದ್ದ ರಾಜ್ಯಗಳ ಹಕ್ಕು, ಸ್ವಾತಂತ್ರ್ಯ ಕಸಿದು, ಹೊಟ್ಟೆ ತುಂಬಿಸಿಕೊಂಡಿದ್ದಕ್ಕೆ ಕೇಂದ್ರ ಸಂಭ್ರಮಿಸಲೇಬೇಕು. GSTಗೆ ರಾಜ್ಯಗಳನ್ನು ಸೇರಿಸಿಕೊಳ್ಳುವಾಗ ಪರಿಹಾರ ನೀಡುವುದಾಗಿ ಹೇಳಿದ್ದ ಕೇಂದ್ರ, ರಾಜ್ಯಗಳನ್ನು ವಂಚಿಸಿದೆ. ಇದಕ್ಕಾಗಿ ರಾಜ್ಯಗಳು ಸಂಭ್ರಮಿಸಬೇಕೆ? ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
GSTಗೆ 4 ವರ್ಷವಾಗಿದ್ದಕ್ಕೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ತೆರಿಗೆ ಮೇಲಿದ್ದ ರಾಜ್ಯಗಳ ಹಕ್ಕು, ಸ್ವಾತಂತ್ರ್ಯ ಕಸಿದು, ಹೊಟ್ಟೆ ತುಂಬಿಸಿಕೊಂಡಿದ್ದಕ್ಕೆ ಕೇಂದ್ರ ಸಂಭ್ರಮಿಸಲೇಬೇಕು. GSTಗೆ ರಾಜ್ಯಗಳನ್ನು ಸೇರಿಸಿಕೊಳ್ಳುವಾಗ ಪರಿಹಾರ ನೀಡುವುದಾಗಿ ಹೇಳಿದ್ದ ಕೇಂದ್ರ, ರಾಜ್ಯಗಳನ್ನು ವಂಚಿಸಿದೆ. ಇದಕ್ಕಾಗಿ ರಾಜ್ಯಗಳು ಸಂಭ್ರಮಿಸಬೇಕೆ?
1/5— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 2, 2021
ಸರಣಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅವರು,
ರಾಜ್ಯಕ್ಕೆ ₹9 ಸಾವಿರ ಕೋಟಿಯಷ್ಟು GST ಪರಿಹಾರ ಬರಬೇಕು. ಈ ಸಂಭ್ರಮದ ವೇಳೆಯಲ್ಲೇ ಪರಿಹಾರ ಬಿಡುಗಡೆ ಆಗಿದ್ದರೆ ಕರ್ನಾಟಕವೂ ಸಂಭ್ರಮಿಸುತ್ತಿತ್ತು. ಕೋವಿಡ್ ಕಾಲದಲ್ಲಿ ಆದಾಯವಿಲ್ಲದೇ ನಲುಗಿರುವ ರಾಜ್ಯಕ್ಕೆ ಪರಿಹಾರದ ಸಿಕ್ಕಿದ್ದಿದ್ದರೆ ಅನುಕೂಲವಾಗುತ್ತಿತ್ತು. ಆದರೆ, ಪರಿಹಾರ ನೀಡದ ಕೇಂದ್ರ ರಾಜ್ಯಗಳ ನೋವಿನ ಮೇಲೆ ಸಂಭ್ರಮಿಸುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯಕ್ಕೆ ₹9 ಸಾವಿರ ಕೋಟಿಯಷ್ಟು GST ಪರಿಹಾರ ಬರಬೇಕು. ಈ ಸಂಭ್ರಮದ ವೇಳೆಯಲ್ಲೇ ಪರಿಹಾರ ಬಿಡುಗಡೆ ಆಗಿದ್ದರೆ ಕರ್ನಾಟಕವೂ ಸಂಭ್ರಮಿಸುತ್ತಿತ್ತು. ಕೋವಿಡ್ ಕಾಲದಲ್ಲಿ ಆದಾಯವಿಲ್ಲದೇ ನಲುಗಿರುವ ರಾಜ್ಯಕ್ಕೆ ಪರಿಹಾರದ ಸಿಕ್ಕಿದ್ದಿದ್ದರೆ ಅನುಕೂಲವಾಗುತ್ತಿತ್ತು. ಆದರೆ, ಪರಿಹಾರ ನೀಡದ ಕೇಂದ್ರ ರಾಜ್ಯಗಳ ನೋವಿನ ಮೇಲೆ ಸಂಭ್ರಮಿಸುತ್ತಿದೆ.
2/5— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 2, 2021
ರಾಜ್ಯಗಳ ಅದಾಯವನ್ನು ಕೇಂದ್ರಕ್ಕೆ ತಿರುಗಿಸಿಕೊಳ್ಳುವುದು, ಅನುದಾನಕ್ಕಾಗಿ ರಾಜ್ಯಗಳು ಕೇಂದ್ರದ ಮುಂದೆ ಗುಲಾಮರಂತೆ ನಿಲ್ಲುವಂತೆ ಮಾಡುವುದು GSTಯ ಉದ್ದೇಶ. ಇಂಥ ಗುಲಾಮಗಿರಿಯನ್ನು ಕಾಂಗ್ರೆಸ್ ರೂಪಿಸಿತು, ಬಿಜೆಪಿ ಜಾರಿಗೆ ತಂದಿತು. ಈಗ ರಾಜ್ಯಗಳು ಪರಿಹಾರಕ್ಕಾಗಿ ಬೇಡುವಂತಾಗಿದೆ. ಪೆಟ್ರೋಲಿಯಂಅನ್ನು GSTಗೆ ಸೇರಿಸದಂತೆ ಹೋರಾಡುವಂತಾಗಿದೆ ಎಂದವರು ಹೇಳಿದ್ದಾರೆ.
ರಾಜ್ಯಗಳ ಅದಾಯವನ್ನು ಕೇಂದ್ರಕ್ಕೆ ತಿರುಗಿಸಿಕೊಳ್ಳುವುದು, ಅನುದಾನಕ್ಕಾಗಿ ರಾಜ್ಯಗಳು ಕೇಂದ್ರದ ಮುಂದೆ ಗುಲಾಮರಂತೆ ನಿಲ್ಲುವಂತೆ ಮಾಡುವುದು GSTಯ ಉದ್ದೇಶ. ಇಂಥ ಗುಲಾಮಗಿರಿಯನ್ನು ಕಾಂಗ್ರೆಸ್ ರೂಪಿಸಿತು, ಬಿಜೆಪಿ ಜಾರಿಗೆ ತಂದಿತು. ಈಗ ರಾಜ್ಯಗಳು ಪರಿಹಾರಕ್ಕಾಗಿ ಬೇಡುವಂತಾಗಿದೆ. ಪೆಟ್ರೋಲಿಯಂಅನ್ನು GSTಗೆ ಸೇರಿಸದಂತೆ ಹೋರಾಡುವಂತಾಗಿದೆ.
3/5— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 2, 2021
ಜಿಎಸ್ಟಿ ರಾಜ್ಯಗಳ ಅನುದಾನ ಕಸಿಯಿತು. ಆದಕ್ಕೆ ಪರಿಹಾರವಾಗಿ ಸಾಮಾನ್ಯರ ಬದುಕನ್ನೇನಾದರೂ ಹಸನಾಗಿಸಿತೇ? ನವ ಉದ್ಯಮಿಗಳನ್ನು ಪ್ರೋತ್ಸಾಹಿಸಿದೆಯೇ? ಅದ್ಯಾವುದೂ ಆಗಿಲ್ಲ. ವ್ಯಾಪರಿಗಳ ಪರಿಸ್ಥಿತಿ ಹಿಂದಿಗಿಂತಲೂ ಈಗ ಏನಾದರೂ ಉತ್ತಮವಾಗಿದೆಯೇ? ಆದರೆ, ಪರಿಸ್ಥಿತಿ ಮಾತ್ರ ಭಿನ್ನವಾಗಿದೆ. ಇಂಥ ಜಿಎಸ್ಟಿ ವ್ಯವಸ್ಥೆಯಲ್ಲಿ ಸಂಭ್ರಮಿಸುವುದೇನಿದೆ? ಎಂದವರು ಪ್ರಶ್ನಿಸಿದ್ದಾರೆ.
ಜಿಎಸ್ಟಿ ರಾಜ್ಯಗಳ ಅನುದಾನ ಕಸಿಯಿತು. ಆದಕ್ಕೆ ಪರಿಹಾರವಾಗಿ ಸಾಮಾನ್ಯರ ಬದುಕನ್ನೇನಾದರೂ ಹಸನಾಗಿಸಿತೇ? ನವ ಉದ್ಯಮಿಗಳನ್ನು ಪ್ರೋತ್ಸಾಹಿಸಿದೆಯೇ? ಅದ್ಯಾವುದೂ ಆಗಿಲ್ಲ. ವ್ಯಾಪರಿಗಳ ಪರಿಸ್ಥಿತಿ ಹಿಂದಿಗಿಂತಲೂ ಈಗ ಏನಾದರೂ ಉತ್ತಮವಾಗಿದೆಯೇ? ಆದರೆ, ಪರಿಸ್ಥಿತಿ ಮಾತ್ರ ಭಿನ್ನವಾಗಿದೆ. ಇಂಥ ಜಿಎಸ್ಟಿ ವ್ಯವಸ್ಥೆಯಲ್ಲಿ ಸಂಭ್ರಮಿಸುವುದೇನಿದೆ?
4/5— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 2, 2021
ಈ ಒಕ್ಕೂಟದಲ್ಲಿ ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನು ಹರಣ ಮಾಡಿದ್ದಕ್ಕೆ ದ್ಯೋತಕವಾಗಿ ಜಿಎಸ್ಟಿ ವ್ಯವಸ್ಥೆ ದೈತ್ಯವಾಗಿ ನಿಂತಿದೆ. ರಾಜ್ಯಗಳನ್ನು ಶೋಷಿಸಿ ಕೇಂದ್ರವನ್ನು ಪೋಷಿಸಿದ ಅರ್ಥವ್ಯವಸ್ಥೆಯಾಗಿ ಜಿಎಸ್ಟಿ ಕಾಣಿಸುತ್ತಿದೆ. ಇಂಥ ಜಿಎಸ್ಟಿಯಿಂದ ರಾಜ್ಯಗಳು ಸಂಭ್ರಮಿಸುವುದು ಏನೂ ಇಲ್ಲ. ಇದು ಕಾಂಗ್ರೆಸ್–ಬಿಜೆಪಿಯ ಯಜಮಾನಿಕೆ ಸಂಕೇತ ಎಂದು ಹೆಚ್ಡಿಕೆ ವ್ಯಾಖ್ಯಾನಿಸಿದ್ದಾರೆ.
ಈ ಒಕ್ಕೂಟದಲ್ಲಿ ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನು ಹರಣ ಮಾಡಿದ್ದಕ್ಕೆ ದ್ಯೋತಕವಾಗಿ ಜಿಎಸ್ಟಿ ವ್ಯವಸ್ಥೆ ದೈತ್ಯವಾಗಿ ನಿಂತಿದೆ. ರಾಜ್ಯಗಳನ್ನು ಶೋಷಿಸಿ ಕೇಂದ್ರವನ್ನು ಪೋಷಿಸಿದ ಅರ್ಥವ್ಯವಸ್ಥೆಯಾಗಿ ಜಿಎಸ್ಟಿ ಕಾಣಿಸುತ್ತಿದೆ. ಇಂಥ ಜಿಎಸ್ಟಿಯಿಂದ ರಾಜ್ಯಗಳು ಸಂಭ್ರಮಿಸುವುದು ಏನೂ ಇಲ್ಲ. ಇದು ಕಾಂಗ್ರೆಸ್–ಬಿಜೆಪಿಯ ಯಜಮಾನಿಕೆ ಸಂಕೇತ.
5/5— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 2, 2021