ಬೆಂಗಳೂರು: ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಈ ವರ್ಷವೂ ಹೊಸ ವರ್ಷಾಚರಣೆಯ ಸಡಗರ ಕಳೆಗುಂದಿದೆ. ನಾಡು ನೂತನ ವರ್ಷವನ್ನು ಸ್ವಾಗತಿಸುವ ಸಿದ್ದತೆಯಲ್ಲಿರುವಾಗಲೇ ರಾಜ್ಯ ಸರ್ಕಾರ ಕಠಿಣ ನಿಯಮ ಜಾರಿಗೊಳಿಸಿದೆ.
ಹೊಸ ವರ್ಷಾಚರಣೆ ಹೆಸರಲ್ಲಿ ಜನರು ಗುಂಪುಗೂಡದಂತೆ ನಿರ್ಬಂಧದ ಆದೇಶ ಜಾರಿ ಮಾಡಲು ಚಿಂತನೆ ನಡೆಸಿದ್ದ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಗುಂಪುಗೂಡದಂತೆ ಹೇಳಲಾಗಿದೆ.
- ಡಿಸೆಂಬರ್ 30ರಿಂದ ಜನವರಿ 2ರವರೆಗೆ ಸಾಮೂಹಿಕ ಸಮಾರಂಭಗಳಿಗೆ ಅವಕಾಶ ಇಲ್ಲ.
- ಪಬ್, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್ಗಲ್ಲಿ ಅರ್ಧದಷ್ಟು ಜನರಿಗೆ ಸೇವೆ ಒದಗಿಸಬಹುದು.
- 2 ಡೋಸ್ ಕೊರೊನಾ ಲಸಿಕೆ ಕಡ್ಡಾಯ
- ಆರ್ಟಿಪಿಸಿಆರ್ ಟೆಸ್ಟ್ ಕಡ್ಡಾಯ.
ಇದೇ ವೇಳೆ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಗ್ರೂಪ್ ಡ್ಯಾನ್ಸ್ಗಾಗಿ ಡಿಜೆ, ಡ್ಯಾನ್ಸ್ ಫ್ಲೋರ್ಗೆ ಅವಕಾಶವಿಲ್ಲ. ಅಪಾರ್ಟ್ಮೆಂಟ್ ಆವರಣದಲ್ಲಿ ವರ್ಷಾಚರಣೆಗೆ ಅವಕಾಶ ಇದೆಯಾದರೂ ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯಾದರೆ ಸಂಘಟಕರೇ ಹೊಣೆಯಾಗುತ್ತಾರೆ.