ಗುಜರಾತ್ ಸ್ಥಳೀಯ ಸಂಸ್ಥೆಗಳಲ್ಲಿ ಜಯಭೇರಿ.. ಈ ಸಾಧನೆಯ ರೂವಾರಿಗಳಿಗೆ
ನಳಿನ್‍ಕುಮಾರ್ ಕಟೀಲ್ ಅಭಿನಂದನೆ
ಬೆಂಗಳೂರು: ಗುಜರಾತ್ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಭಾರತೀಯ ಜನತಾ ಪಕ್ಷವು ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ತವರಲ್ಲಿ ಈ ಜಯಭೇರಿ ಮೂಲಕ ಕಮಲದ ಜೈತ್ರಯಾತ್ರೆ ಮುಂದುವರಿದಿದೆ.
ಗುಜರಾತ್‌ನ ಈ ಸ್ಥಳೀಯ ಸಂಸ್ಥೆಗಳ ಫಲಿತಾಂಶ ಬಗ್ಗೆ ಕರ್ನಾಟಕದಲ್ಲೂ ಸಂಭ್ರಮ ಮನೆಮಾಡಿದೆ. ರಾಜ್ಯ ಬಿಜೆಪಿ ಘಟಕವೂ ವಿಜಯೋತ್ಸವದ ಸಡಗರದಲ್ಲಿದೆ. ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಗುಜರಾತ್ ಫಲಿತಾಂಶ ಬಗ್ಗೆ ಸಂತಸ ವ್ಯಕ್ತಪಡಿಸಿದ್ದು, ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದ್ದಾರೆ.
ಈ ಫಲಿತಾಂಶ ಮೂಲಕ ಗುಜರಾತ್ ರಾಜ್ಯವು ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೆ ಸಾಬೀತಾಗಿದೆ. ಕೃಷಿ ಸುಧಾರಣಾ ಮಸೂದೆಗಳು, 370ನೇ ವಿಧಿ ರದ್ದತಿ, ಶ್ರೀರಾಮ ಮಂದಿರದ ನಿರ್ಮಾಣ, ತ್ರಿವಳಿ ತಲಾಖ್ ರದ್ದು ಮಾಡಿದ ಕೇಂದ್ರದ ನಿರ್ಧಾರವನ್ನು ಜನರು ಬೆಂಬಲಿಸಿದ್ದಾರೆ. ಅಲ್ಲದೆ, ಒಂದೇ ಕುಟುಂಬದ ನೇತೃತ್ವದ ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದಾರೆ ಎಂದೂ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಇದು ಗುಜರಾತ್ ರಾಜ್ಯದ ಜನತೆಗೆ ಸಂದ ಜಯವಾಗಿದೆ. ಜನಪ್ರಿಯ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ವಿಜಯ್ ರೂಪಾಣಿ ಅವರ ನೇತೃತ್ವ ಮತ್ತು ಕಾರ್ಯಕ್ರಮಗಳ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿರುವುದು ಇದರಿಂದ ಸ್ಪಷ್ಟವಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ಬಣ್ಣಿಸಿದ್ದಾರೆ.