ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು ಮಾರ್ಧನಿಸಿದೆ. ಕುಪ್ವಾರ ಜಿಲ್ಲೆಯಲ್ಲಿರುವ ಗಡಿ ನಿಯಂತ್ರಣ ರೇಖೆಯಲ್ಲಿಒಳನುಸುಳಿದ್ದ ಉದ್ರರನ್ನು ಭಾರತೀಯ ಸೇನೆ ಯೋಧರು ಗುರುವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಉಗ್ರರ ಒಳನುಸುಳುವಿಕೆ ಬಗ್ಗೆ ಮಾಹಿತಿ ಪಡೆದ ಸೇನೆ ಕ್ಷಿಪ್ರ ಕಾರ್ಯಾಚರಣೆಗಿಳಿದು ವಿದ್ರೋಹಿಗಳ ಪ್ರಯತ್ನವನ್ನು ವಿಫಲಗೊಳಿಸಿದೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಬಾರಾಮುಲ್ಲಾ ಲೋಕಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ದಿನ ಬಾಕಿ ಇರುವಾಗಲೇ ಎಲ್‌ಒಸಿ ಬಳಿ ಈ ಘಟನೆ ನಡೆದಿದ್ದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನೆ ಹಾಗೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
























































